ಜಮ್ಮು-ಕಾಶ್ಮೀರ: ದಕ್ಷಿಣ ಕಾಶ್ಮೀರದ ಬಿಜ್ಬೆಹರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮೂವರು ಉಗ್ರರು ಹಾಗೂ ಉಗ್ರರು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಸೇನಾ ಪಡೆ ವಶಕ್ಕೆ ಪಡೆದುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾ ಪಡೆ ನಡೆಸಿದ್ದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಜುನೈದ್ ಮಟ್ಟು ಸೇರಿದಂತೆ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು.
ಎನ್ ಕೌಂಟರ್ ಅಂತ್ಯಗೊಂಡ ಬಳಿಕ 90 ಬೆಟಾಲಿಯನ್ ಸಿಆರ್'ಪಿಎಫ್ ಪಡೆ ಮತ್ತು ರಾಷ್ಟ್ರೀಯ ರೈಫಲ್ಸ್ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರ ಮೃತದೇಹಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ.
ಎನ್'ಕೌಂಟರ್ ನಡೆದ ಸ್ಥಳದಲ್ಲಿ ಉಗ್ರರ ಮೃತದೇಹಗಳು, ಸ್ಫೋಟಕ ವಸ್ತುಗಳು, 2 ಎಕೆ-47, 6 ನಿಯತಕಾಲಿಕೆಗಳು ಮತ್ತು 2 ಪೌಚ್ ಗಳನ್ನು ಸೇನಾ ಪಡೆ ವಶಕ್ಕೆ ಪಡೆದುಕೊಂಡಿದೆ ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics