ಶಿಮ್ಲಾ: ಶಿಮ್ಲಾ ಮಹಾನಗರ ಪಾಲಿಕೆಯ 34 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಬಿಜೆಪಿ ಕಳೆದ ಮೂರು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಆದರೆ ಸರಳ ಬಹುಮತ ಪಡೆಯುವಲ್ಲಿ ಕೇಸರಿ ಪಡೆ ವಿಫಲವಾಗಿದೆ.
ಕಳೆದ 26 ವರ್ಷಗಳಿಂದ ಶಿಮ್ಲಾ ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ವಿರುದ್ಧ ಬಿಜೆಪಿ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆಡಳಿತರೂಢ ಕಾಂಗ್ರೆಸ್ ಕೇವಲ 12 ಸ್ಥಾನಗಳನ್ನು ಪಡೆದುಕೊಂಡಿದೆ.
ನಾಲ್ವರು ಪಕ್ಷೇತರರು ಹಾಗೂ ಓರ್ವ ಸಿಪಿಐಎಂ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲು 18 ಸದಸ್ಯರ ಬೆಂಬಲದ ಅಗತ್ಯವಿದೆ. ಹೀಗಾಗಿ ಬಿಜೆಪಿ ಪಕ್ಷೇತರರ ಬೆಂಬಲದೊಂದಿಗೆ ಶಿಮ್ಲಾ ಮಹಾನಗರ ಪಾಲಿಕೆ ಅಧಿಕಾರ ಹಿಡಿಯುವ ಸಾಧ್ಯತೆ ಇದೆ.
ಪಕ್ಷೇತರರ ಬೆಂಬಲದೊಂದಿಗೆ ಶಿಮ್ಲಾ ಮಹಾನಗರ ಪಾಲಿಕೆಯ ಅಧಿಕಾರ ಹಿಡಿಯುತ್ತೇವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos