ಸಂಗ್ರಹ ಚಿತ್ರ 
ದೇಶ

ಹಿಮಾಚಲಪ್ರದೇಶ: ಬಹುಹಂತದ ಕಟ್ಟಡ ಕುಸಿತ- 11 ಜನರ ಸಾವು

ಹಿಮಾಚಲಪ್ರದೇಶದ ಕಂಗ್ರಾ ಜಿಲ್ಲೆಯ ನುರ್ಪುರ್ ನಲ್ಲಿ ಬಹುಹಂತದ ಕಟ್ಟಡವೊಂದು ಕುಸಿದುಬಿದ್ದಿದ್ದು, ಪರಿಣಾಮ 11 ಜನ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಕ್ರುವಾರ...

ನುರ್ಪುರ್: ಹಿಮಾಚಲಪ್ರದೇಶದ ಕಂಗ್ರಾ ಜಿಲ್ಲೆಯ ನುರ್ಪುರ್ ನಲ್ಲಿ ಬಹುಹಂತದ ಕಟ್ಟಡವೊಂದು ಕುಸಿದುಬಿದ್ದಿದ್ದು, ಪರಿಣಾಮ 11 ಜನ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಕ್ರುವಾರ ನಡೆದಿದೆ. 
ಫುಟ್ ವೇರ್ ಅಂಗಡಿಯ ಪಕ್ಕ ಫೌಂಡೇಶನ್ ಗಾಗಿ ಸುಮಾರು 12ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಭೂಮಿಯನ್ನು ಅಗೆಯುತ್ತಿದ್ದರು. ಈ ವೇಳೆ ಫುಟ್ ವೇರ್ ಶಾಪ್ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರ ಮೇಲೆ ಕುಸಿದು ಬಿದ್ದಿದೆ. 
ದುರಂತದಲ್ಲಿ 11ಕ್ಕೂ ಹೆಚ್ಚು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದುರ್ಘಟನೆ ಸಂಭವಿಸುತ್ತಿದ್ದಂತೆ ಕಾರ್ಯಾಚರಣೆಗಿಳಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇದೀಗ ಓರ್ವ ಕೂಲಿ ಕಾರ್ಮಿಕನ ದೇಹವನ್ನು ಹೊರ ತೆಗೆದಿದ್ದಾರೆ. ಮತ್ತಿಬ್ಬರು ವ್ಯಕ್ತಿಗಳಿಗೆ ತೀವ್ರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಮತ್ತಷ್ಟು ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯಾಚಱಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆಗೆ ಇದೀಗ ಎನ್ ಡಿಆರ್'ಎಫ್ ತಂಡ ಕೂಡ ಕೈಜೋಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ