ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಎಸ್ಐಸಿಒಪಿ ಕಾಂಪ್ಲೆಕ್ಸ್ ಮೇಲೆ ಉಗ್ರರ ದಾಳಿ: ಭದ್ರತಾ ಪಡೆ-ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿರುವ ಎಸ್ಐಸಿಒಪಿ ಕಾಂಪ್ಲೆಕ್ಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಶನಿವಾರ...

ಸಂಗ್ರಹ ಚಿತ್ರ
Manjula VN
Updated On : 17 Jun 2017, 2:02 am

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿರುವ ಎಸ್ಐಸಿಒಪಿ ಕಾಂಪ್ಲೆಕ್ಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ. 


ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿರುವ ಎಸ್ಐಸಿಒಪಿ ಸೇನಾ ಶಿಬಿರದ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಎಚ್ಚೆತ್ತ ಸೇನಾ ಪಡೆ ಉಗ್ರರ ವಿರುದ್ದ ಕಾರ್ಯಾಚರಣೆ ನಡೆಸಲು ಮುಂದಾಗಿದೆ.

Advertisement

Advertisement

ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಸಾವು-ನೋವು ಸಂಭವಿಸಿರುವುದಾಗಿ ಯಾವುದೇ ವರದಿಗಳಾಗಿಲ್ಲ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement