ನರೇಂದ್ರ ಮೋದಿ 
ದೇಶ

ಕೇರಳ ಮೆಟ್ರೋ ಉದ್ಘಾಟಿಸಿ, ಸಂಚರಿಸಿದ ಪ್ರಧಾನಿ ನರೇಂದ್ರ ಮೋದಿ

ಕೇರಳದ ಮೊದಲ ಮೆಟ್ರೊ ಲೈನ್ ನ್ನು ಪ್ರಧಾನಿ ನರೇಂದ್ರ ಮೋದಿ ಜೂ.17 ರಂದು ಉದ್ಘಾಟಿಸಿದ್ದಾರೆ.

ಕೊಚ್ಚಿ: ಕೇರಳದ ಮೊದಲ ಮೆಟ್ರೊ ಲೈನ್ ನ್ನು ಪ್ರಧಾನಿ ನರೇಂದ್ರ ಮೋದಿ ಜೂ.17 ರಂದು ಉದ್ಘಾಟಿಸಿದ್ದು, ಕೇರಳ ರಾಜ್ಯಪಾಲ ಪಿ ಸದಾಶಿವಂ, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹಾಗೂ ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಇ.ಶ್ರೀಧರನ್  ಅವರೊಂದಿಗೆ ಮೆಟ್ರೋದಲ್ಲಿ ಸಂಚರಿಸಿದ್ದಾರೆ. 
ಕೊಚ್ಚಿಯಲ್ಲಿ ಒಟ್ಟು 25 ಕಿಮೀ ದೂರದ ಮೊದಲ ಹಂತದ ಮೆಟ್ರೋ ಪೈಕಿ 13.2 ಕಿಮೀ ವ್ಯಾಪ್ತಿಯ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಪಲರಿವಟ್ಟೊಂ ನಿಂದ ಪಥಡಿಪ್ಪಲಂ ಮೆಟ್ರೋ ನಿಲ್ದಾಣದ ವರೆಗೆ ಪ್ರಧಾನಿ ನರೇಂದ್ರ ಮೋದಿ ಮೆಟ್ರೋದಲ್ಲಿ ಸಂಚರಿಸಿದ್ದಾರೆ. 
ಮೆಟ್ರೋ ಉದ್ಘಾಟಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ ಮೆಟ್ರೋ ರೈಲ್ ಲಿಮಿಟೆಡ್ ಕೇಂದ್ರ, ಕೇರಳ ಸರ್ಕಾರದ 50:50 ಅನುಪಾತದ ಸಹಭಾಗಿತ್ವದ್ದಾಗಿದೆ. ಕೇಂದ್ರ ಸರ್ಕಾರ ಈ ವರೆಗೆ 2000 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!