ಸೇನಾ ಮುಖ್ಯಸ್ಥ ಬಿಪಿನ್ ರಾವತ್
ದಂಡಿಗಲ್: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಯುವಕರಿಗೆ ತಪ್ಪು ಮಾಹಿತಿಗಳನ್ನು ರವಾನಿಸಲಾಗುತ್ತಿದ್ದು, ತಪ್ಪು ಮಾಹಿತಿಗಳಿಂದಾಗಿ ಯುವಕರು ಭದ್ರತಾಪಡೆಗಳ ಮೇಲೆ ಕಲ್ಲೂ ತೂರಾಟ ನಡೆಸುತ್ತಿದ್ದಾರೆಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶನಿವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರಿಗೆ ತಪ್ಪು ಮಾಹಿತಿಗಳನ್ನು ರವಾನಿಸಲಾಗುತ್ತಿದ್ದು, ಇದರಿಂದಾಗಿ ಯುವಕರು ಸೇನಾ ಪಡೆ ವಿರುದ್ಧ ಕಲ್ಲುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ, ಪ್ರಸ್ತುತ ಅವರು ಮಾಡುತ್ತಿರುವ ತಪ್ಪಿನ ಬಗ್ಗೆ ಶೀಘ್ರದಲ್ಲಿಯೇ ಅವರಿಗೆ ಅರ್ಥವಾಗುತ್ತದೆ ಎಂದು ನನಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಅರ್ವಾನಿ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ಕುರಿತಂತೆ ಮಾತನಾಡಿರುವ ಅವರು, ದಕ್ಷಿಣ ಕಾಶ್ಮೀರದಲ್ಲಿ ಸಾಕಷ್ಟು ದಾಳಿಗಳು ನಡೆಯುತ್ತಿದ್ದು, ದಾಳಿ ಹತ್ತಿಕ್ಕಲು ಕಠಿಣ ಕ್ರಮಕೈಗೊಳ್ಳಬೇಕಾದ ಅಗತ್ಯವಿದೆ. ಶೀಘ್ರದಲ್ಲಿಯೇ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದಿದ್ದಾರೆ.
ಮಾನವನ ಜೀವದ ಬಗ್ಗೆ ನಮಗೆ ಕಾಳಜಿಯಿದೆ. ಮಾನವ ಹಕ್ಕುಗಳನ್ನು ನಾವು ಯಾವುದೇ ಕಾರಣಕ್ಕೂ ಉಲ್ಲಂಘನೆ ಮಾಡುವುದಿಲ್ಲ. ಇಂತಹ ಪರಿಸ್ಥಿತಿಗಳನ್ನು ಹೇಗೆ ನಿಭಾಯಿಸಬೇಕೆಂಬುದರ ಬಗ್ಗೆ ನಮಗೆ ತರಬೇತಿ ನೀಡಿರುತ್ತಾರೆ. ಪರಿಸ್ಥಿತಿಗಳನ್ನು ಜವಾಬ್ದಾರಿಯುತವಾಗಿಯೇ ನಿಭಾಯಿಸುತ್ತೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics