ಸಂಗ್ರಹ ಚಿತ್ರ 
ದೇಶ

ಉಗ್ರರ ವಿರುದ್ದ ಕಾರ್ಯಾಚರಣೆ ಬಳಿಕ ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ: ಹಲವೆಡೆ ನಿರ್ಬಂಧ ಜಾರಿ

ಉಗ್ರರ ವಿರುದ್ಧ ಸೇನಾ ಪಡೆ ಕಾರ್ಯಾಚರಣೆ ನಡೆಸಿದ ಬಳಿಕ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆಯಲ್ಲಿ ಹಲವೆಡೆ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು...

ಶ್ರೀನಗರ: ಉಗ್ರರ ವಿರುದ್ಧ ಸೇನಾ ಪಡೆ ಕಾರ್ಯಾಚರಣೆ ನಡೆಸಿದ ಬಳಿಕ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆಯಲ್ಲಿ ಹಲವೆಡೆ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಮಟ್ಟು ಹತ್ಯೆ ಬಳಿಕ ಪ್ರತ್ಯೇಕತಾವಾದಿಗಳು ಪ್ರತಿಭಟನೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ರೈನ್ವಾರಿ, ಕನ್ಯಾರ್, ನೌಹಟ್ಟಾ, ಎಂ.ಆರ್.ಗುಂಜ್ ಮತ್ತು ಸಫಾ ಕಡಲ್ ಸೇರಿದಂತೆ ಹಲವೆಡೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಶ್ರೀನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ ಫರೂಖ್ ಅಹ್ಮದ್ ಲೋನ್ ಅವರು ತಿಳಿಸಿದ್ದಾರೆ. 
ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಚ್ಚರವಹಿಸಲಾಗಿದ್ದು, ಕಾಶ್ಮೀರದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಿಆರ್'ಪಿಎಫ್ ಪಡೆ ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ಭಾರತೀಯ ಸೇನಾ ಪಡೆ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಮುಖ್ಯ ಕಮಾಂಡರ್ ಎನಿಸಿಕೊಂಡಿದ್ದ ಜುನೈದ್ ಮಟ್ಟೂ ಮತ್ತು ಆತನ ಸಹಚರರನ್ನು ಹತ್ಯೆ ಮಾಡಿತ್ತು. 
ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದಾಗ ಕೆಲ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಈ ವೇಳೆ ನಡೆಸಲಾದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದರು. ಅಲ್ಲದೆ, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 
ಎರಡು ವಾಹನಗಳಲ್ಲಿ ಬಂದಿದ್ದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರು, ಏಕಾಏಕಿ ಪೊಲೀಸ್ ಗಸ್ತು ಪಡೆ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದರು. ದಾಳಿಗೆ 6 ಪೊಲೀಸರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!