ಇಂಫಾಲ್: ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಯುನೈಟೆಡ್ ಟ್ರೈಬಲ್ ಲಿಬೆರೇಷನ್ ಆರ್ಮಿ(ಯುಟಿಎಲ್ಎ)ಯ ಮೂವರು ಉಗ್ರರನ್ನು ಶನಿವಾರ ಮಣಿಪುರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಖಚಿತ ಮಾಹಿತಿಯನ್ನು ಆಧಾರಿಸಿ ಜಿರಿಬಿಮ್ ಬಜಾರ್ ನಲ್ಲಿರುವ ಹೋಟೆಲ್ ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಮೂವರು ಉಗ್ರರನ್ನು ಬಂಧಿಸಿದ್ದಾರೆ ಮತ್ತು ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, 15 ಗ್ರಾಂ ಹೇರಾಯಿನ್ ಹಾಗೂ ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಉಗ್ರರು ತಾವು ಶಸ್ತ್ರಾಸ್ತ್ರ ಕಳ್ಳಸಾಗಾಣೆ ಮತ್ತು ಡ್ರಗ್ಸ್ ಸಾಗಾಣೆ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.