ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ಓರ್ವ ನಾಗರಿಕನಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮದ ಅರ್ರುಭಾಗ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರಿಕ ಗಾಯಗೊಂಡಿದ್ದಾನೆಂದು ತಿಳಿದುಬಂದಿದೆ.
ವ್ಯಕ್ತಿಯ ಹೊಟ್ಟೆ ಭಾಗಕ್ಕೆ ಗುಂಡು ತಗುಲಿದ್ದು, ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.