ನವದೆಹಲಿ: 47 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಟ್ವಿಟರ್ ನಲ್ಲಿ ರಾಹುಲ್ ಗಾಂಧಿಗೆ ಶುಭ ಹಾರೈಸಿರುವ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು, ಅವರ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.