ಮುಂಬೈ: ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ರಾಮ್ ನಾಥ್ ಕೋವಿಂದ್ ಹೆಸರನ್ನು ಅಂತಿಮಗೊಳಿಸಿದ್ದು, ಎನ್ ಡಿಎ ಮಿತ್ರ ಪಕ್ಷವಾಗಿರುವ ಶಿವಸೇನೆ ಬೆಂಬಲ ಅನಿಶ್ಚಿತವಾಗಿದೆ.
"ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಧವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸಿ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೇಳಿದ್ದರು. ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ನೀಡುವ ಬಗ್ಗೆ ಪಕ್ಷದ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದಾರೆ ಎಂದು ಶಿವಸೇನೆಯ ಸಂಸದ ಸಂಜಯ್ ರೌತ್ ಪ್ರತಿಕ್ರಿಯೆ ನೀಡಿದ್ದಾರೆ.
ಜೂ.18 ರಂದು ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದ ಉದ್ಧವ್ ಠಾಕ್ರೆ, ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ನಂತರ ಬೆಂಬಲ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು.