ದೇಶ

ಪಂಜಾಬ್: ನರ್ಸರಿಯಿಂದ ಪಿ.ಎಚ್ ಡಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ

Sumana Upadhyaya
ಚಂಡೀಗಢ: ನರ್ಸರಿಯಿಂದ ಪಿ.ಎಚ್ ಡಿವರೆಗೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಪಂಜಾಬ್ ಸರ್ಕಾರ ಘೋಷಿಸಿದೆ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಾದ ಮಹಿಳಾ ಸಶಕ್ತೀಕರಣದ ಭಾಗವಾಗಿ ಪಂಜಾಬ್ ಸರ್ಕಾರ ಈ ಮಹತ್ವಪೂರ್ಣ ಹೆಜ್ಜೆ ತೆಗೆದುಕೊಂಡಿದೆ.
ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಪಂಜಾಬ್ ಸರ್ಕಾರ ಈಗಾಗಲೇ ಶೇಕಡಾ 33ರಿಂದ ಶೇಕಡಾ 50ಕ್ಕೆ ಹೆಚ್ಚಿಸಿದೆ.
ರಾಜ್ಯಪಾಲರ ಭಾಷಣಕ್ಕೆ ಧನ್ಯವಾದ ಹೇಳಿ ನಿನ್ನೆ ಸಂಜೆ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಮಕ್ಕಳಿಗೆ ಉಚಿತ ಪಠ್ಯಪುಸ್ತರ ವಿತರಣೆ ಮತ್ತು ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಹಾಗೂ ಎಲ್ ಕೆಜಿ ತರಗತಿಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗುವುದು ಎಂದು ಹೇಳಿದರು.
ಚುನಾವಣಾ ಪೂರ್ವ ಭರವಸೆಗಳಲ್ಲಿ ಮತ್ತೊಂದನ್ನು ಈಡೇರಿಸಿದ ಮುಖ್ಯಮಂತ್ರಿ, 13,000 ಪ್ರಾಥಮಿಕ ಶಾಲೆಗಳು ಮತ್ತು ಎಲ್ಲಾ 48 ಸರ್ಕಾರಿ ಶಾಲೆಗಳಿಗೆ ಉಚಿತ ವೈಫೈ ಸೇವೆ ಒದಗಿಸಲಾಗುವುದು ಎಂದರು.ಮುಂದಿನ ತಿಂಗಳಿನಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷೆಯನ್ನು ಪ್ರಚುರಪಡಿಸಲು ಮುಖ್ಯಮಂತ್ರಿಗಳು ಮಹತ್ವದ ಪ್ರಾಯೋಗಿಕ ಯೋಜನೆಯನ್ನು ಘೋಷಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 5 ಹೊಸ ಕಾಲೇಜುಗಳ ಸ್ಥಾಪನೆ ಮಾಡಲಾಗುವುದು ಎಂದು ಕೂಡ ಮುಖ್ಯಮಂತ್ರಿ ಘೋಷಿಸಿದ್ದಾರೆ.
SCROLL FOR NEXT