ಭೋಪಾಲ್: ಪ್ರತಿಭಟನೆ ನಡೆಯುತ್ತ ವೇಳೆ ಪಕ್ಷದ ಕಾರ್ಯಕರ್ತನೋರ್ವನಿಗೆ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರು ಕಪಾಳ ಮೋಕ್ಷ ಮಾಡಿರುವ ಘಟನೆ ನಡೆದಿದೆ.
ಭೋಪಾಲ್ ನ ಸಾಗರ್ ಎಂಬ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪಕ್ಷ ಕಾರ್ಯಕರ್ತನೋರ್ವ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಆರಂಭಿಸಿದ್ದಾನೆ. ಈ ವೇಳೆ ಅಜಯ್ ಸಿಂಗ್ ಅವರು ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಜಯ್ ಸಿಂಗ್ ಕೇಂದ್ರದ ಮಾಜಿ ಸಚಿವ ಅರ್ಜುನ್ ಸಿಂಗ್ ಅವರ ಪುತ್ರನಾಗಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ಆಪ್ತರಾಗಿದ್ದಾರೆ.