ದೇಶ

ಯೋಗವನ್ನು ಅಭ್ಯಾಸವನ್ನಾಗಿ ರೂಢಿಸಿಕೊಳ್ಳಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕರೆ

Srinivas Rao BV
ನವದೆಹಲಿ: ಜೂ.21 ರಂದು ರಾಷ್ಟ್ರಪತಿ ಭವನದಲ್ಲಿ 3 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ,  ಯೋಗವನ್ನು ಪ್ರತಿಯೊಬ್ಬ ಭಾರತೀಯನೂ ಅಭ್ಯಾಸವನ್ನಾಗಿ ರೂಢಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ. 
ಆರೋಗ್ಯಕರ ಜೀವನಕ್ಕೆ ಯೋಗ ಮುಖ್ಯವಾಗಿದ್ದು, ಭಾರತದ ಪುರಾತನ ಪದ್ಧತಿ ಯೋಗ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳನ್ನು ಸರಿಪಡಿಸಲು ಸಹಕಾರಿಯಾಗಿದೆ. ಯೋಗ ದಿನಾಚರಣೆಯಂದು ಮಾತ್ರವಲ್ಲದೇ, ವರ್ಷ ಪೂರ್ತಿ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. 
ದೇಶದ ಜನತೆಯ ಆರೋಗ್ಯಕ್ಕಾಗಿ ಶುಭಹಾರೈಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ವಿಶ್ವಸಂಸ್ಥೆ ಮೂಲಕ ಜೂ.21 ನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
SCROLL FOR NEXT