ನವದೆಹಲಿ: ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ದೆಹಲಿಯಲ್ಲಿ ಯೋಗಾಭ್ಯಾಸ ಮಾಡಿದ್ದಾರೆ.
ಹಲವು ಆಸನಗಳನ್ನು ಅಭ್ಯಾಸ ಮಾಡಿರುವ ರಾಮ್ ನಾಥ್ ಕೋವಿಂದ್, " ಭಾರತದ ಸಾಂಪ್ರದಾಯಿಕ ಪದ್ಧತಿಯಾಗಿರುವ ಯೋಗವನ್ನು ಅಳವಡಿಸಿಕೊಳ್ಳುವಂತೆ ದೇಶದ ಜನತೆಗೆ ಕರೆ ನೀಡಿದ್ದಾರೆ.
ಹಲವು ಗಣ್ಯರು ಹಾಗೂ ಜನಸ್ತೋಮದ ಜತೆಗೆ ರಾಮ್ ನಾಥ್ ಕೋವಿಂದ್ ಸುಮಾರು 45 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡಿದ್ದು, ಪ್ರತಿಯೊಬ್ಬರೂ ಯೋಗವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.
ರಾಮ್ ನಾಥ್ ಕೋವಿಂದ್ ಈಗಾಗಲೇ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಝೆಡ್+ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದೆ.