ಸೋಪೋರ್: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಸೋಪೋರ್ ಜಿಲ್ಲೆಯ ಪಝಲ್ಪೊರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಹಾಗೂ 22 ಆರ್'ಆರ್ ಸೇನಾ ಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಸೇನಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಬಳಿಸಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಎಂದು ವರದಿಗಳು ತಿಳಿಸಿವೆ.