ರಾಮ್ ನಾಥ್ ಕೋವಿಂದ್ ಮೀರಾ ಕುಮಾರ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್ ರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ಮಿತ್ರಪಕ್ಷಗಳು ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್ ರನ್ನು ಕಣಕ್ಕಿಳಿಸಲು ತೀರ್ಮಾನಿಸಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 17 ವಿಪಕ್ಷ ನಾಯಕರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮೀರಾ ಕುಮಾರ್ ಅವರನ್ನೇ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಳಿಸಲು ಮುಖಂಡರು ಒಮ್ಮತ ವ್ಯಕ್ತಪಡಿಸಿದ್ದಾರೆ. ಮೀರಾ ಕುಮಾರ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.
ಎನ್ಡಿಎ ಸರ್ಕಾರ ದಲಿತ್ ಕಾರ್ಡ್ ಉಪಯೋಗಿಸಿ ದಲಿತರಾಗಿರುವ ರಾಮ್ ನಾಥ್ ಕೋವಿಂದ್ ಅವರನ್ನು ಕಣಕ್ಕಿಳಿಸಿತ್ತು. ಅದೇ ರೀತಿ ಕಾಂಗ್ರೆಸ್ ಮಿತ್ರಪಕ್ಷಗಳು ದಲಿತ ಸಮುದಾಯಕ್ಕೆ ಸೇರಿದ ಮೀರಾ ಕುಮಾರ್ ರನ್ನೇ ಕಣಕ್ಕಳಿಸುತ್ತಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರವಧಿ ಮುಕ್ತಾಯಗೊಂಡಿದ್ದರಿಂದ ಪ್ರಧಾನಿ ಮೋದಿ ಸರ್ಕಾರ ಹೊಸ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಮುಂದಾಗಿತ್ತು. ಜುಲೈ 17ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics