Rajiv Gauba 
ದೇಶ

ಕೇಂದ್ರ ಅಧಿಕಾರಿಗಳ ವರ್ಗದಲ್ಲಿ ಮಹತ್ವದ ಬದಲಾವಣೆ: ರಾಜೀವ್ ಗೌಬಾ ಮುಂದಿನ ಗೃಹ ಕಾರ್ಯದರ್ಶಿ

ಕೇಂದ್ರದ ಉನ್ನತ ಮಟ್ಟದ ಅಧಿಕಾರಿಗಳ ವರ್ಗದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ರಾಜೀವ್ ಗೌಬಾ ಮುಂದಿನ ಗೃಹ ಕಾರ್ಯದರ್ಶಿಯಾಗಿ ನೇಮಕಗೊಳ್ಳಲಿದ್ದಾರೆ.

ನವದೆಹಲಿ: ಕೇಂದ್ರದ ಉನ್ನತ ಮಟ್ಟದ ಅಧಿಕಾರಿಗಳ ವರ್ಗದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ರಾಜೀವ್ ಗೌಬಾ ಮುಂದಿನ ಗೃಹ ಕಾರ್ಯದರ್ಶಿಯಾಗಿ ನೇಮಕಗೊಳ್ಳಲಿದ್ದಾರೆ. 
ರಾಜೀವ್ ಮೆಹರ್ಶಿ ಹಾಲಿ ಗೃಹ ಕಾರ್ಯದರ್ಶಿಯಾಗಿದ್ದು, ಆಗಸ್ಟ್ 30 ಕ್ಕೆ ಅಧಿಕಾರವಧಿ ಪೂರ್ಣಗೊಳಿಸಲಿದ್ದಾರೆ. ಆ.31 ಕ್ಕೆ ರಾಜೀವ್ ಗೌಬಾ ನೂತನ ಗೃಹ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 1982 ರ ಜಾರ್ಖಂಡ್ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ರಾಜೀವ್ ಗೌಬಾ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಗೃಹ ಇಲಾಖೆಯ ವಿಶೇಷ ಅಧಿಕಾರಿಯಾಗಿ (ಒಎಸ್ ಡಿ) ಈ ತಕ್ಷಣದಿಂದ ರಾಜೀವ್ ಗೌಬಾ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೇಳಿದೆ. 
ಆ.31 ರಂದು ರಾಜೀವ್ ಗೌಬಾ ಗೃಹ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಗರಾಭಿವೃದ್ಧಿ ಇಲಾಖೆಗೆ ದುರ್ಗಾ ಶಂಕರ್ ಮಿಶ್ರ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ