ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಭಾರಿ ಎನ್ ಕೌಂಟರ್: ಮೂವರು ಉಗ್ರರ ಸದೆಬಡಿದ ಭಾರತೀಯ ಯೋಧರು!

ಕಾಶ್ಮೀರದಲ್ಲಿ ಉಗ್ರ ವಿರುದ್ಧ ಗುರುವಾರ ನಡೆದ ಭಾರಿ ಪ್ರಮಾಣದ ಎನ್ ಕೌಂಟರ್ ನಲ್ಲಿ ಭಾರತೀಯ ಯೋಧರು ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀನಗರ: ಕಾಶ್ಮೀರದಲ್ಲಿ ಉಗ್ರ ವಿರುದ್ಧ ಗುರುವಾರ ನಡೆದ ಭಾರಿ ಪ್ರಮಾಣದ ಎನ್ ಕೌಂಟರ್ ನಲ್ಲಿ ಭಾರತೀಯ ಯೋಧರು ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ.

ಪುಲ್ವಾಮದ ಕಾಕ್ಪೋರಾದಲ್ಲಿ ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಯೋಧರು ಕೂಡ ದಾಳಿ ಮಾಡಿದ್ದು, ಈ ವೇಳೆ ಉಗ್ರರು ಸೈನಿಕರ ಮೇಲೆ ದಾಳಿ ಮಾಡಿದ್ದಾರೆ. ಸೈನಿಕರು ಕೂಡ ಪ್ರತಿದಾಳಿ ಮಾಡಿದ್ದು. ಸುಮಾರು ಗಂಟೆಗಳ  ಕಾಲ ನಡೆದ ಎನ್ ಕೌಂಟರ್ ಇದೀಗ ಅಂತ್ಯವಾಗಿದ್ದು, ದಾಳಿ ಮಾಡುತ್ತಿದ್ದ ಎಲ್ಲ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅಂತೆಯೇ ಮೃತ ಉಗ್ರರಿಂದ 3 ಎಕೆ 47 ಬಂದೂಕು ಮತ್ತು ಭಾರಿ ಪ್ರಮಾಣದ ಸ್ಫೋಟಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳದಲ್ಲಿ ಶೋಧ ಕಾರ್ಯ ನಡೆಯಲಾಗುತ್ತಿದೆ. ಇನ್ನು ಘಟನೆಯಲ್ಲಿ  ಭಾರತೀಯ ಸೇನೆಯ 50 ರಾಷ್ಟ್ರೀಯ ರೈಫಲ್ಸ್ ದಳದ ಓರ್ವ ಯೋಧ ಗಾಯಗೊಂದ್ದು. ಗಾಯಾಳು ಸೈನಿಕನನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತ ಉಗ್ರರನ್ನು ಲಷ್ಕರ್ ಸಂಘಟನೆಯ ಮಜೀದ್ ಮೀರ್, ಶರೀಖ್ ಅಹ್ಮಮದ್ ಮತ್ತು ಇರ್ಷಾದ್ ಅಹ್ಮದ್ ಎಂದು ಗುರುತು ಪತ್ತೆ ಮಾಡಲಾಗಿದೆ.

ಉಗ್ರರ ಒಳ ನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಸೇನೆ
ಮತ್ತೊಂದೆಡೆ ಗಡಿ ನಿಯಂತ್ರಣ ರೇಖೆ ಬಳಿಯ ಪಲನ್ ವಾಲಾ ಬಳಿ ಎಕೆ 47 ಬಂದೂಕು ಸಹಿತ ಉಗ್ರರು ಗಡೆಯೊಳಗೆ ಒಳ ನುಸುಳಲು ಯತ್ನಿಸಿದ್ದು, ಈ ವೇಳೆ ದಾಳಿ ಮಾಡಿದ ಸೇನೆ ಉಗ್ರರ ಪ್ರಯತ್ನವನ್ನು ವಿಫಲಗೊಳಿಸಿದೆ. ಸೇನೆ  ದಾಳಿ ಮಾಡುತ್ತಿದ್ದಂತೆಯೇ ಉಗ್ರರು ತಮ್ಮ ಶಸ್ತ್ರಾಸ್ತ್ರದಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ವೇಳೆ ಸೈನಿಕರು ಉಗ್ರ ಎಕೆ 47 ಬಂದೂಕು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT