ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯಲ್ಲಿ ಪಾಲು ಹೊಂದಲು ಟಾಟಾ ಸಮೂಹ ಸಂಸ್ಥೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಸಹ ಏರ್ ಇಂಡಿಯಾ ಸಂಸ್ಥೆಯನ್ನು ಭಾಗಶಃ ಅಥವಾ ಸಂಪೂರ್ಣ ಖಾಸಗೀಕರಣ ಮಾಡುವ ಚಿಂತನೆಯಲ್ಲಿರುವ ಸಂದರ್ಭದಲ್ಲೇ ಟಾಟಾ ಸಮೂಹ ಸಂಸ್ಥೆ ಸಹ ಏರ್ ಇಂಡಿಯಾದಲ್ಲಿ ಪಾಲುದಾರಿಕೆ ಹೊಂದಲು ಬಯಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಾಟಾ ಸಮೂಹ ಸಂಸ್ಥೆಯ ವಕ್ತಾರರು ಮಾತ್ರ ನಾವು ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ ಟಾಟಾ ಸಂಸ್ಥೆ ಶೇ.51 ರಷ್ಟು ಷೇರು ಖರೀದಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಏರ್ ಇಂಡಿಯಾವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ನೀತಿ ಆಯೋಗದ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಪಾಲುದಾರಿಕೆಯನ್ನು ಮಾರಾಟ ಮಾಡುವ ಆಯ್ಕೆಯನ್ನು ಮುಕ್ತವಾಗಿರಿಸಲಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos