ಗುಂಡು ಹಾರಿಸಿಕೊಂಡು ಬಿಜೆಪಿ ಶಾಸಕರ ಬಾಡಿಗಾರ್ಡ್ ಆತ್ಮಹತ್ಯೆ
ಮಹಾರಾಷ್ಟ್ರದ ನಕ್ಸಲ್ ಪೀಡಿತ ಅರ್ಮೊರಿ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣ ಗಜ್ಬೆ ಅವರ ಅಂಗರಕ್ಷಕ ಭಾಸ್ಕರ್ ಚೌಕೆ(34) ಪಿಸ್ತೂಲ್‍ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ...
ಮುಂಬಯಿ: ಮಹಾರಾಷ್ಟ್ರದ ನಕ್ಸಲ್ ಪೀಡಿತ ಅರ್ಮೊರಿ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣ ಗಜ್ಬೆ ಅವರ ಅಂಗರಕ್ಷಕ ಭಾಸ್ಕರ್ ಚೌಕೆ(34) ಪಿಸ್ತೂಲ್‍ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗಡ್‌ಚಿರೋಲಿ ಜಿಲ್ಲೆಯ ಆರ್ಮೋರಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಕೃಷ್ಣ ಗಜಬೆ ಅವರ ವಾರ್ಸಾ ತೆಹಶೀಲ್‌ನಲ್ಲಿರುವ ಕಚೇರಿಯಲ್ಲಿ ಅವರ ಬಾಡಿಗಾರ್ಡ್, 34ವರ್ಷದ ಭಾಸ್ಕರ್ ಚೌಕೆ ಹುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಡಿಗಾರ್ಡ್ ಭಾಸ್ಕರ್ ಚೌಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಉದ್ದೇಶ ಕಾಣುವುದಿಲ್ಲ; ಆತ ಕೌಟುಂಬಿಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಆತನಿಗೆ ವಿವಾಹಿತ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ ಎಂದು ಎಸ್‌ಪಿ ದೇಶ್‌ಮುಖ್ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.