ಬುಲಂದ್ ಶಹರ್(ಉತ್ತರಪ್ರದೇಶ): ಸಂಚಾರಿ ನಿಯಮ ಉಲ್ಲಂಘಿಸಿದ ಬಿಜೆಪಿ ಮುಖಂಡನಿಗೆ ಉತ್ತರಪ್ರದೇಶದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತರಾಟೆಗೆ ತೆಗೆದುಕೊಂಡಿರುವ ಘಟನೆ ಬುಲಂದ್ ಶಹರ್ ನಲ್ಲಿ ನಡೆದಿದೆ.
ಮಹಿಳಾ ಪೊಲೀಸ್ ಅಧಿಕಾರಿ ಶ್ರೇಷ್ಟಾ ಶರ್ಮಾ ಸ್ಥಳೀಯ ಬಿಜೆಪಿ ನಾಯಕ ಪ್ರಮೋದ್ ಎಂಬುವರು ಬೈಕ್ ನಲ್ಲಿ ತೆರಳುತ್ತಿದ್ದಾಗ ತಡೆದು ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ. ಆದರೆ ಪ್ರಮೋದ್ ದಾಖಲೆ ನೀಡಲು ವಿಫಲರಾಗಿದ್ದರಿಂದ ಅವರಿಗೆ ದಂಡ ವಿಧಿಸಲಾಗಿತ್ತು.
ಈ ವೇಳೆ ಪ್ರಮೋದ್ ಶ್ರೇಷ್ಟಾ ಶರ್ಮಾ ಜತೆ ಮಾತಿನ ಚಕಮಿಕಿ ನಡೆಸಿದ್ದಾರೆ. ಆಗ ಶ್ರೇಷ್ಟಾ ಶರ್ಮಾ ನಿಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಅಂದ್ರೆ ಮುಖ್ಯಮಂತ್ರಿ ಆದಿತ್ಯನಾಥ್ ರಿಂದ ಪತ್ರ ಬರೆಸಿಕೊಂಡು ಬರುವಂತೆ ಹೇಳಿದ್ದಾರೆ. ಜತೆಗೆ ನಿಯಮ ಪಾಲಿಸದಿದ್ದರೆ ಮುಖ್ಯಮಂತ್ರಿಯನ್ನು ಬಿಡುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರಿಗೆ ಖಾರವಾಗಿ ಉತ್ತರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics