ಪೊಲೀಸ್ ಅಧಿಕಾರಿ ಮೊಹಮ್ಮದ್ ಆಯೂಬ್ ಪಂಡಿತ್
ಶ್ರೀನಗರ: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಕಲ್ಲು ತೂರಾಟ ನಡೆಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ಪೊಲೀಸ್ ಅಧಿಕಾರಿ ಮೊಹಮ್ಮದ್ ಆಯೂಬ್ ಪಂಡಿತ್ ಅವರ ಹತ್ಯೆ ಪ್ರಕರಣವನ್ನು ನಿನ್ನೆಯಷ್ಟೇ ವಿಶೇಷ ತನಿಖಾ ದಳ (ಎಸ್ಐಟಿ)ಗೆ ವಹಿಸಲಾಗಿತ್ತು. ಪ್ರಕರಣದ ತನಿಖೆಯನ್ನು ಆರಂಭಿಸಿದ್ದ ಅಧಿಕಾರಿಗಳು ನಿನ್ನೆಯಷ್ಟೇ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ರಂಜಾನ್ ಹಿನ್ನಲೆಯಲ್ಲಿ ಕರ್ತವ್ಯ ನಿಯೋಜಿತನಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಲ್ಲು ತೂರಾಟಗಾರರು ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಪ್ರಕರಣ ಸಾಕಷ್ಟು ವಿರೋಧ ಹಾಗೂ ಟೀಕೆಗಳಿಗೆ ಗುರಿಯಾಗಿತ್ತು. ಘಟನೆ ವೇಳೆ ಹತ್ಯೆಗೀಡಾಗಿದ್ದ ಪೊಲೀಸ್ ಅಧಿಕಾರಿ ಪಂಡಿತ್ ಅವರು ಸ್ವ ರಕ್ಷಣೆಗಾಗಿ ಪಿಸ್ತೂಲಿನಿಂದ ಗುಂಡುಗಳನ್ನು ಹಾರಿಸಿದ್ದರು. ಈ ವೇಳೆ ಮೂವರು ನಾಗರಿಕರು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics