ದೇಶ

ಬೆಂಬಲ ಕೋರಿ ನಾಳೆಯಿಂದ ರಾಷ್ಟ್ರ ಪ್ರವಾಸಕ್ಕೆ ಸಜ್ಜಾದ ಕೋವಿಂದ್

Guruprasad Narayana
ಲಖನೌ: ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ನಾಳೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಬೆಂಬಲ ಕೋರಲಿದ್ದಾರೆ. ಜುಲೈ ೧೭ ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬೆಂಬಲ ಕೋರಿ ಕೋವಿಂದ್ ರಾಷ್ಟ್ರದಾದ್ಯಂತ ಪ್ರವಾಸ ನಡೆಸಲಿದ್ದಾರೆ. 
ರಾಷ್ಟ್ರಪತಿ ಚುನಾವಣೆಯಲ್ಲಿ ಉತ್ತರ ಪ್ರದೇಶದ ಶಾಸಕರ ಮತದ ಮೌಲ್ಯ ಅತಿ ಹೆಚ್ಚಿದೆ. ಈ ಚುನಾವಣೆಯಲ್ಲಿ ಮತ ಹಾಕಲು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಶಾಸಕರು ಕೂಡ ಅರ್ಹರಾಗಿರುತ್ತಾರೆ. 
"ರಾಷ್ಟ್ರಪತಿ ಚುನಾವಣೆಯ ಮತದಾನ ಪಾರದರ್ಶಕವಾಗಿ ಮತ್ತು ಸಮಸ್ಯೆಯಿಲ್ಲದೆ ಜರುಗಲು ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ"ಎಂದು ಉತ್ತರ ಪ್ರದೇಶದ ವಿಧಾನಸಭೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಕಳೆದ ಸಂಜೆ ವಿಧಾನಸಭಾ ಅಧಿಕಾರಿಗಳೊಂದಿಗೆ ಸಿದ್ಧತೆ ಬಗ್ಗೆ ಮಾತುಕತೆ ನಡೆಸಿರುವುದಾಗಿ ಚುನಾವಣಾ ಆಯೋಗದ ಅಧಿಕಾರಿ ಹೇಳಿದ್ದಾರೆ. 
ಉತ್ತರಪ್ರದೇಶ ಪ್ರವಾಸದ ನಂತರ ಕೋವಿಂದ್ ಉತ್ತರಾಖಂಡಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಕೋವಿಂದ್ ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯ ಮೂಲದವರು. 
ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮೀರಾ ಕುಮಾರಿ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿವೆ. 
SCROLL FOR NEXT