ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ರಜನಿಕಾಂತ್ ಹಣಕಾಸು ಅವ್ಯವಹಾರ ನಡೆಸಿದ್ದು, ರಾಜಕೀಯಕ್ಕೆ ಸೇರಬಾರದು: ಸ್ವಾಮಿ

ರಜನಿಕಾಂತ್ ಅವರು ರಾಜಕೀಯಕ್ಕೆ ಸೇರ್ಪಡೆಗೊಳ್ಳಬಾರದು ಎಂದು ಈ ಹಿಂದಿನಿಂದಲೂ ಹೇಳಿಕೊಂಡು ಬಂದಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಇದೀಗ ಮತ್ತೆ ತಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ...

ನವದೆಹಲಿ: ರಜನಿಕಾಂತ್ ಅವರು ರಾಜಕೀಯಕ್ಕೆ ಸೇರ್ಪಡೆಗೊಳ್ಳಬಾರದು ಎಂದು ಈ ಹಿಂದಿನಿಂದಲೂ ಹೇಳಿಕೊಂಡು ಬಂದಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಇದೀಗ ಮತ್ತೆ ತಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ. 
ರಜನಿಕಾಂತ್ ಅವರು ರಾಜಕೀಯಕ್ಕೆ ಸೇರ್ಪಡೆಗೊಳ್ಳುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸುಬ್ರಮಣಿಯನ್ ಸ್ವಾಮಿಯವರು ರಜನಿಕಾಂತ್ ಅವರು ಹಣಕಾಸು ಅವ್ಯವಹಾರ ನಡೆಸಿದ್ದು, ರಾಜಕೀಯಕ್ಕೆ ಸೇರ್ಪಡೆಗೊಳ್ಳಬಾರದು ಎಂದು ಹೇಳಿದ್ದಾರೆ. 
ರಜನಿ ಹಣಕಾಸು ಅವ್ಯವಹಾರ ನಡೆಸಿರುವುದಕ್ಕೆ ನನ್ನ ಬಳಿ ದಾಖಲೆಗಳಿವೆ. ಒಂದು ವೇಳೆ ರಜನಿಯವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರೂ ಬಹುಕಾಲ ಮುಂದುವರೆಯಲು ಸಾಧ್ಯವಿಲ್ಲ ಎಂದು ಖಾಸಗಿ ಮಾಧ್ಯಮವೊಂದರಲ್ಲಿ ಸುಬ್ರಮಣಿಯನ್ ಸ್ವಾಮಿಯವರು ಹೇಳಿಕೊಂಡಿದ್ದಾರೆ. 
ರಾಜಕೀಯ ಸೇರ್ಪಡೆ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ರಜನಿಕಾಂತ್ ಅವರು, ರಾಜಕೀಯ ಸೇರ್ಪಡೆ ಕುರಿತ ಸುದ್ದಿಗಳನ್ನು ನಾನು ತಳ್ಳಿಹಾಕಿಲ್ಲ. ಪ್ರಸ್ತುತ ನಾನು ಚಿಂತನೆ ನಡೆಸುತ್ತಿದ್ದು, ನಂತರವಷ್ಟೇ ನಿರ್ಧಾರ ಕೈಗೊಳ್ಳುತ್ತೇನೆ. ನಿರ್ಧಾರ ಕೈಗೊಂಡ ಬಳಿಕ ಮಾಹಿತಿ ನೀಡುತ್ತೇನೆಂದು ಹೇಳಿದ್ದರು. . 
ಕಳೆದ ಮೇ ತಿಂಗಳಿನಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದ ರಜನಿಯವರು, ಯುದ್ಧಕ್ಕೆ ಸಿದ್ಧರಾಗಿ ಎಂದು ಹೇಳುವ ಮೂಲಕ ರಾಜಕೀಯ ಸೇರ್ಪಡೆಗೊಳ್ಳುವ ಸುಳಿವನ್ನು ನೀಡಿದ್ದರು. ಯುದ್ಧ ಆರಂಭವಾದರೆ, ನಾಯಕರು ತಮ್ಮ ತಾಯಿನಾಡು ರಕ್ಷಣೆಗೆ ಧಾವಿಸುತ್ತಾರೆಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!