ಸಂಗ್ರಹ ಚಿತ್ರ 
ದೇಶ

ಶ್ರೀನಗರ ಶಾಲೆಯಲ್ಲಿ ಎನ್'ಕೌಂಟರ್: ಇಬ್ಬರು ಯೋಧರಿಗೆ ಗಾಯ

ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸುತ್ತಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ...

ಶ್ರೀನಗರ: ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸುತ್ತಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆಸಿದೆ. 
ನಿನ್ನೆಯಷ್ಟೇ ಪಾಂಥಾಕೋಕ್ ಪ್ರದೇಶ ಸಿಆರ್'ಪಿಎಫ್ ಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ನಂತರ ಸ್ಥಳದಿಂದ ಕಾಲ್ಕಿತ್ತಿದ್ದ ಉಗ್ರರು ಶ್ರೀನಗರದ ದೆಹಲಿ ಪಬ್ಲಿಕ್ ಶಾಲೆಯಲ್ಲಿ ತಲೆಮರೆಸಿಕೊಂಡಿದ್ದರು. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ 3.40ರ ಸುಮಾರಿಗೆ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು. 
ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಇಬ್ಬರು ಯೋಧರು ಗಾಯಗೊಂಡಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

DJ ಸೌಂಡ್‌ಗೆ ಕಂಪಿಸಿದ ಶಾಲೆ: ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು! video

ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆ; ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಲೆಕ್ಚರರ್ ಬಂಧನ!

EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ-Sanjay Raut