ನವದೆಹಲಿ: ಕತಾರ್ ಅರಬ್ ರಾಷ್ಟ್ರಗಳಿಂದ ಆರ್ಥಿಕ ನಿರ್ಬಂಧಕ್ಕೊಳಗಾಗಿದ್ದು, ಕತಾರ್ ನಲ್ಲಿರುವ ಭಾರತೀಯರ ರಕ್ಷಣೆಗೆ ಅಗತ್ಯವಿರುವ ಎಲ್ಲವನ್ನೂ ಭಾರತ ಸರ್ಕಾರ ಮಾಡಲಿದೆ ಎಂದು ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.
ಕತಾರ್ ನಲ್ಲಿರುವ ಭಾರತೀಯ ರಾಯಭಾರಿಯೊಂದಿಗೆ ಭಾರತ ಸರ್ಕಾರ ನಿರಂತರ ಸಂಪರ್ಕದಲ್ಲಿದೆ, ನಮ್ಮ ಪ್ರಜೆಗಳ ರಕ್ಷಣೆಗೆ ಭಾರತ ಸರ್ಕಾರ ಅಗತ್ಯವಿರುವ ಎಲ್ಲವನ್ನೂ ಮಾಡಲಿದ್ದೇವೆ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ರಮಣ ಕುಮಾರ್ ಎಂಬುವವರು ಕತಾರ್ ನಲ್ಲಿರುವ ಭಾರತೀಯರ ರಕ್ಷಣೆ ಕೋರಿದ್ದರ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಕತಾರ್ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಭಾರತ ಸರ್ಕಾರ ಹೇಳಿದ್ದಾರೆ.