ಸಂಗ್ರಹ ಚಿತ್ರ 
ದೇಶ

ಆಯುಬ್ ಪಂಡಿತ್ ಹತ್ಯೆ ಪ್ರಕರಣ: ಸಾರ್ವಜನಿಕ ಪ್ರಾರ್ಥನೆಗಳಿಂದ ದೂರವಿರಿ- ಸಿಬ್ಬಂದಿಗಳಿಗೆ ಅಧಿಕಾರಿಗಳು

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಬೆನ್ನಲ್ಲೇ ಈದ್ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಾರ್ಥನೆಗಳಿಂದ ದೂರವಿರುವಂತೆ ಸಿಬ್ಬಂದಿಗಳಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು...

ಶ್ರೀನಗರ: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಬೆನ್ನಲ್ಲೇ ಈದ್ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಾರ್ಥನೆಗಳಿಂದ ದೂರವಿರುವಂತೆ ಸಿಬ್ಬಂದಿಗಳಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ಸಲಹೆ ನೀಡಿದ್ದಾರೆ. 
ಆಯುಬ್ ಹತ್ಯೆಯಾದ ಹಿನ್ನಲೆಯಲ್ಲಿ ಭದ್ರತೆ ಇರುವ ಮಸೀದಿಗಳಿಗೆ ಮಾತ್ರವೇ ತೆರಳಿ ಪ್ರಾರ್ಥನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಸಾಮಾನ್ಯ ಮಸೀದಿ ಹಾಗೂ ಈದ್ಗಾಗಳಿಗೆ ಹೋಗದಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾದಿೆ ಎಂದು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. 
ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ. ಪೊಲೀಸ್ ಸಿಬ್ಬಂದಿಗಳು ನಮ್ಮ ಜನ. ಹೀಗಾಗಿ ಅವರಿಗೆ ಸಲಹೆಗಳನ್ನು ನೀಡುತ್ತಿದ್ದೇನೆ. ಅವರೂ ಕೂಡ ನಮ್ಮ ಮಕ್ಕಳು. ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ತಿಳಿಸುತ್ತಿದ್ದೇವನೆಂದು ಎಂದು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಎಸ್.ಪಿ.ವೈದ್ ಅವರು ಹೇಳಿದ್ದಾರೆ. 
ಜಾಮಿಯಾ ಮಸೀದಿಯಲ್ಲಿ ರಂಜಾನ್ ಪ್ರಯುಕ್ತ ರಾತ್ರಿ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ರಂಜಾನ್ ಪ್ರಾರ್ಥನೆ ಹಿನ್ನಲೆಯಲ್ಲಿ ಭದ್ರತೆಗಾಗಿ ಆಯುಬ್ ಪಂಡಿತ್ ಅವರು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ಆಯುಬ್ ಅವರು ಮಸೀದಿಯ ಹೊರಭಾಗದಲ್ಲಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಈ ವೇಳೆ ಪಂಡಿತ್ ಅವರ ಮೇಲೆ ಜನರು ಹಲ್ಲೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್

ಟಿವಿ, ಒಟಿಟಿಗೆ ಬರುತ್ತಾ 'ಪ್ರೇಮದ ಊರಲಿ'? ಚಿತ್ರತಂಡ ಹೇಳಿದ್ದೇನು?