ಸಂಗ್ರಹ ಚಿತ್ರ 
ದೇಶ

ರಾಷ್ಟ್ರಪತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮೀರಾಕುಮಾರ್​ಗೆ ಜೆಡಿಎಸ್​ ಬೆಂಬಲ!

ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್​ ಅವರಿಗೆ ಜೆಡಿಎಸ್​ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್​ ಅವರಿಗೆ ಜೆಡಿಎಸ್​ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.

ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡ ಗುಲಾಂನಬಿ ಅಜಾದ್ ಅವರು ಎಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿರುವ ಹಿನ್ನಲೆಯಲ್ಲಿ ಜೆಡಿಎಸ್​ ವರಿಷ್ಠ  ಎಚ್​.ಡಿ.ದೇವೇಗೌಡ ಬೆಂಬಲ ಸೂಚಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಮೀರಾಕುಮಾರ್​ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ಕುಪೇಂದ್ರ ರೆಡ್ಡಿ, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ ಹಲವು ಸಂಸದ ಹಾಗೂ ಶಾಸಕರು ಮೀರಾ ಕುಮಾರ್ ಅವರಿಗೆ ಬೆಂಬಲಿಸಿ ಸಹಿ ಹಾಕಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, "ಮೀರಾ ಕುಮಾರ್​ ಅವರಿಗೆ ಬೆಂಬಲ ನೀಡುವಂತೆ ದೇವೇಗೌಡ ಅವರು ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಮೀರಾ ಕುಮಾರ್​ ಅವರಿಗೆ  ಬೆಂಬಲಿಸುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್​ ದೇವೇಗೌಡ ಅವರೊಂದಿಗೆ ದೂರವಾಣಿಯಲ್ಲಿ ಮನವಿ ಮಾಡಿದ್ದರು" ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!