ಜೂ.26 ರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಷ್ಟ್ರ ಪ್ರವಾಸ: ಪುದುಚೆರಿಯಿಂದ ಪ್ರಾರಂಭ
ಬಿಜೆಪಿ ರಾಷ್ಟ್ರಾಧ್ಯಕ್ಷ ಅತಮಿತ್ ಶಾ ಜೂ.26 ರಿಂದ ರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಪುದುಚೆಯಿಂದ ಅಮಿತ್ ಶಾ ಅವರ ರಾಷ್ಟ್ರಪ್ರವಾಸ ಪ್ರಾರಂಭವಾಗಲಿದ್ದು,
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅತಮಿತ್ ಶಾ ಜೂ.26 ರಿಂದ ರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಪುದುಚೆಯಿಂದ ಅಮಿತ್ ಶಾ ಅವರ ರಾಷ್ಟ್ರಪ್ರವಾಸ ಪ್ರಾರಂಭವಾಗಲಿದ್ದು,
110 ದಿನಗಳ ಸುದೀರ್ಘ ಪ್ರವಾಸ ಇದಾಗಿರಲಿದ್ದು, ದೇಶಾದ್ಯಂತ ಬಿಜೆಪಿಯನ್ನು ಬಲಪಡಿಸುವ ಉದ್ದೇಶ ಹೊಂದಲಾಗಿದೆ. ಪುದುಚೆರಿಗೆ ತೆರಳಲಿರುವ ಅಮಿತ್ ಶಾ, 2 ದಿನಗಳ ಕಾಲ ಅಲ್ಲೇ ಇರಲಿದ್ದು, ಪುದುಚೆರಿ ವಿಮಾನ ನಿಲ್ದಾಣದಲ್ಲಿರುವ ಕವಿ ಚಿನ್ನಸ್ವಾಮಿ ಸುಬ್ರಹ್ಮಣ್ಯ ಭಾರತಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.
ಪುದುಚೆರಿಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಿರುವ ಅಮಿತ್ ಶಾ, ಪಕ್ಷದ ಬಲವರ್ಧನೆ ದೃಷ್ಟಿಯಿಂದ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.