ಸುಕ್ಮಾ: ಛತ್ತೀಸ್‍ಗಢದ ಸುಲ್ಮಾ ಜಿಲ್ಲೆಯಲ್ಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಸುಕ್ಮಾ ಜಿಲ್ಲೆಯ ಚಿಂತಗುಫ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಿಲ್ಲಾ ಮೀಸಲು ಸಿಬ್ಬಂದಿ ಮತ್ತು ವಿಶೇಷ ಕಾರ್ಯಪಡೆ ಜಂಟಿಯಾಗಿ ನಕ್ಸಲ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದು ಈ ವೇಳೆ ನಕ್ಸಲರು ಯೋಧರ ನಡುವೆ ಗುಂಡಿನ ಚಕಮಿಕಿ ನಡೆದಿದೆ. ಇದರಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು ಐವರು ಯೋಧರಿಗೆ ಗಂಭೀರ ಗಾಯಗಳಾಗಿವೆ ಎಂದು ಡಿಜಿಪಿ ಡಿಎಂ ಅವಸ್ಥಿ ಹೇಳಿದ್ದಾರೆ.
ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಓರ್ವ ನಕ್ಸಲ್ ನನ್ನು ಯೋಧರು ಹತ್ಯೆ ಮಾಡಿದ್ದು ಆತನ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ನಕ್ಸಲರ ಧಮನಕ್ಕೆ ಯೋಧರು ಕಾರ್ಯಾಚರಣೆ ಮುಂದುವರೆಸಿದ್ದಾರೆ.