ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ರೈಲ್ವೆ ನಿಲ್ದಾಣದಿಂದ ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ

ಇಬ್ಬರು ಕಾಮುಕರು ಬರೇಲಿ ರೈಲ್ವೆ ನಿಲ್ದಾಣದಿಂದ ಮಹಿಳೆಯೊಬ್ಬರನ್ನು ಅಪಹರಿಸಿ ನಿರಂತರ ನಾಲ್ಕು ದಿನಗಳ ಕಾಲ ಆಕೆಯ ಮೇಲೆ ಸಾಮೂಹಿಕ...

ಸಂಭಾಲ್: ಇಬ್ಬರು ಕಾಮುಕರು ಬರೇಲಿ ರೈಲ್ವೆ ನಿಲ್ದಾಣದಿಂದ ಮಹಿಳೆಯೊಬ್ಬರನ್ನು ಅಪಹರಿಸಿ ನಿರಂತರ ನಾಲ್ಕು ದಿನಗಳ ಕಾಲ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಗಿನ್ನೋರ್ ಪ್ರದೇಶದಲ್ಲಿ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಜೂನ್ 16ರಂದು ಇಬ್ಬರು ಮಕ್ಕಳೊಂದಿಗೆ ಪಾಣಿಪತ್ ಗೆ ತೆರಳುತ್ತಿದ್ದ 40 ವರ್ಷದ ಮಹಿಳೆಗೆ ನಿದ್ರೆ ಮಾತ್ರೆ ನೀಡಿ ಮಕ್ಕಳೊಂದಿಗೆ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಪಾಂಡೆ ಅವರು ಹೇಳಿದ್ದಾರೆ.
ಮಹಿಳೆಯನ್ನು ಬರೇಲಿ ರೈಲ್ವೆ ನಿಲ್ಡಾಣದಿಂದ ಗಿನ್ನೋರ್ ಪ್ರದೇಶದಲ್ಲಿರುವ ಹಳ್ಳಿಯೊಂದಕ್ಕೆ ಕರೆದೊಯ್ದು ನಾಲ್ಕು ದಿನಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ನಾಲ್ಕು ದಿನಗಳ ನಂತರ ತನ್ನ 13 ವರ್ಷದ ಮಗನೊಂದಿಗೆ ಕಷ್ಟಪಟ್ಟು ಕಾಮುಕರಿಂದ ತಪ್ಪಿಸಿಕೊಂಡು ಬಂದಿದ್ದೇನೆ. ಆದರೆ ನನ್ನ ಮಗಳು ಇನ್ನೂ ಅದೇ ಗ್ರಾಮದಲ್ಲಿರುವುದಾಗಿ ಸಂತ್ರಸ್ಥ ಮಹಿಳೆ ತಿಳಿಸಿದ್ದಾರೆ.
ಈ ಸಂಬಂಧ ನಿನ್ನೆ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ವಿರುದ್ಧ ಚಂದೌಸಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್ ಛಬ್ಬಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ