ಯೋಗಿ ಆದಿತ್ಯನಾಥ್ 
ದೇಶ

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ 100 ದಿನ ಪೂರೈಸಿದ ಯೋಗಿ ಆದಿತ್ಯನಾಥ್: ರೈತರ ಅಭಿವೃದ್ಧಿಯ ಭರವಸೆ

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ 100 ದಿನ ಪೂರೈಸಿದ್ದು, ಅ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿಯುಳ್ಳ ಕಿರು ...

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ 100 ದಿನ ಪೂರೈಸಿದ್ದು, ಅ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿಯುಳ್ಳ ಕಿರು ಹೊತ್ತಗೆ ಬಿಡುಗಡೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ 100 ದಿನ್ ವಿಶ್ವಾಸ್ ಕೆ ಎಂಬ ಪುಸ್ತಕ ಬಿಡುಗಡೆ ಮಾಡಿದರು.ಮಾರ್ಚ್ 19 ರಂದು ಅಧಿಕಾರ ಸ್ವೀಕರಿಸಿದ ಯೋಗಿ ಆದಿತ್ಯನಾಥ್,ಉತ್ತರ ಪ್ರದೇಶವನ್ನು ಅಭಿವೃದ್ಧಿ ಶೀಲರಾಜ್ಯ ವನ್ನಾಗಿ ಮುಂದೆ ಕೊಂಡೊಯ್ಯಲು ಬದ್ಧರಾಗಿರುವುದಾಗಿ ಹೇಳಿದ್ದಾರೆ.
ಕಳೆದ ವರ್ಷಗಳಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಕಾರಣದಿಂದ ಉತ್ತರ ಪ್ರದೇಶವು ಅಭಿವೃದ್ಧಿಗೆ ಹಿನ್ನಡೆಯುಂಟಾಗಿತ್ತು ಎಂದು ಹಿಂದಿನ ಸರ್ಕಾರದ ವಿರುದ್ದ ಅವರು ಹರಿಹಾಯ್ದಿದ್ದಾರೆ.
2017ನೇ ವರ್ಷವನ್ನು ಗರೀಬ್ ಕಲ್ಯಾಣ್ ವರ್ಷ್ ಎಂದು ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಉತ್ತರ ಪ್ರದೇಶ ಕೃಷಿ ಆಧಾರಿತ ರಾಜ್ಯವಾಗಿದೆ ಈ ಹಿನ್ನೆಲೆಯಲ್ಲಿ ಕೃಷಿಗೆ ಹಾಗೂ ರೈತ ಸಂಬಂಧಿತ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಬ್ಬು ಬೆಳೆಗಾರರಿಗೆ ಬಾಕಿ ಉಳಿದಿದ್ದ 22, 517 ಕೋಟಿ ರು ಹಣವನ್ನು ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ. ತಮ್ಮ ಸರ್ಕಾರದ ಪ್ರಮುಖ ನಿರ್ಧಾರಗಳಾದ ರೈತರ ಸಾಲಮನ್ನಾ ಹಾಗೂ ಕಾನೂನು ಸುವ್ಯವಸ್ಥೆ ವಿಚಾರಗಳನ್ನು ಹೆಚ್ಚು ಬಿಂಬಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!