ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ 
ದೇಶ

ಪ್ರಜಾಪತಿ ಭೇಟಿ: ಕ್ರಿಮಿನಲ್'ಗಳೊಂದಿಗಿನ ಮುಲಾಯಂ ಭೇಟಿ ಹೊಸದೇನಲ್ಲ- ಬಿಜೆಪಿ

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಗಾಯತ್ರಿ ಪ್ರಜಾಪತಿಯವರನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರು ಭೇಟಿಯಾಗಿರುವುದಕ್ಕೆ ಬಿಜೆಪಿ ಬುಧವಾರ ತೀವ್ರವಾಗಿ ಕಿಡಿಕಾರಿದೆ...

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಗಾಯತ್ರಿ ಪ್ರಜಾಪತಿಯವರನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರು ಭೇಟಿಯಾಗಿರುವುದಕ್ಕೆ ಬಿಜೆಪಿ ಬುಧವಾರ ತೀವ್ರವಾಗಿ ಕಿಡಿಕಾರಿದೆ. 
ಮುಲಾಯಂ ಹಾಗೂ ಪ್ರಜಾಪತಿ ಭೇಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸುಧಾಂಶು ತ್ರಿವೇದಿಯವರು, ಒಬ್ಬ ಅತ್ಯಾಚಾರಿ ಆರೋಪಿ ಕುರಿತಂತೆ ಹಿರಿಯ ನಾಯಕರೊಬ್ಬರು ಈ ರೀತಿಯಾಗಿ ಹೇಳಿದೆ ನೀಡುತ್ತಿರುವುದು ದುರಾದೃಷ್ಟಕರ. ಕ್ರಿಮಿನಲ್ ಗಳನ್ನು ಮುಲಾಯಂ ಅವರು ಭೇಟಿಯಾಗುತ್ತಿರುವುದು ಹೊಸದೇನಲ್ಲ ಎಂದು ಹೇಳಿದ್ದಾರೆ. 
ಪ್ರಜಾಪತಿಯವರಿಗೆ ಮುಲಾಯಂ ಅವರು ಬೆಂಬಲ ನೀಡುತ್ತಿರುವುದು ನಿಜಕ್ಕೂ ಖಂಡನೀಯ. ಒಮ್ಮೆ ಮುಲಾಯಂ ಅವರು ನೀಡಿದ್ದ ಹೇಳಿಕೆಯನ್ನು ಇಲ್ಲಿ ನಾವು ಸ್ಮರಿಸಬಹುದು. ಹುಡುಕರು ತಪ್ಪುಗಳನ್ನು ಮಾಡುತ್ತಾರೆಂದು ಹೇಳಿದ್ದರು. ಸಮಾಜವಾದಿ ಪಕ್ಷ ಕ್ರಿಮಿನಲ್ ಗಳಿಗೆ, ಭ್ರಷ್ಟ ಅಧಿಕಾರಿಗಳಿಗೆ ಹಾಗೂ ಸಮಾಜಘಾತುಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತದೆ ಎಂಬುದು ಹೊಸದೇನಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!