ನಾಮಪತ್ರ ಸಲ್ಲಿಕೆಗೆ ತೆರಳುತ್ತಿರುವ ಮೀರಾ ಕುಮಾರ್ ಅವರೊಂದಿಗೆ ವಿರೋಧ ಪಕ್ಷಗಳ ನಾಯಕರು 
ದೇಶ

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಬುಧವಾರ ನಾಮಪತ್ರ ಸಲಿಸಿದರು...

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಬುಧವಾರ ನಾಮಪತ್ರ ಸಲಿಸಿದರು. 
ಇಂದು ಬೆಳಗ್ಗೆ ಸಂಸತ್ತಿಗೆ ಬಂದ ಮೀರಾ ಕುಮಾರ್ ಅವರು ಲೋಕಸಭಾ ಕಾರ್ಯದರ್ಶಿಯವರಿಗೆ ನಾಮಪತ್ರ ಸಲ್ಲಿಸಿದರು. 
ನಾಮಪತ್ರ ಸಲ್ಲಿಕೆ ವೇಳೆ ಮೀರಾ ಕುಮಾರ್ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎನ್'ಸಿಪಿ ಮುಖಂಡ ಶರದ್ ಪವಾರ್, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ, ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಒಟ್ಟು 17 ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. 
ನಾಮಪತ್ರ ಸಲ್ಲಿಕೆಗೂ ಮುನ್ನ ಮೀರಾಕುಮಾರ್ ಅವರು ರಾಜ್ ಘಾಟ್'ಗೆ ತೆರಳಿ ಮಹಾತ್ಮ ಗಾಂಧಿಯವರ ಸಮಾಧಿಗೆ ನಮನ ಸಲ್ಲಿಸಿದರು. ರಾಷ್ಟ್ರಪತಿ ಚುನಾವಣೆ ಜುಲೈ.17ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಚುನಾವಣೆಯಲ್ಲಿ ಮೀರಾ ಕುಮಾರ್ ಮತ್ತು ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರ ನಡುವೆ ನೇರ ಹಣಾಹಣಿ ನಿರೀಕ್ಷಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!