ದೇಶ

7 ನೇ ವೇತನ ಆಯೋಗದ ಶಿಫಾರಾಸ್ಸಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Srinivas Rao BV
ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳ ಭತ್ಯೆಗಳಿಗೆ ಸಂಬಂಧಿಸಿದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. 
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, 7 ನೇ ವೇತನ ಆಯೋಗದ ಶಿಫಾರಸ್ಸಿಗೆ ಕೇಂದ್ರ ಸಚಿವ ಸಂಪುಟ  34 ಮಾರ್ಪಾಡುಗಳನ್ನು ಮಾಡುವ ಮೂಲಕ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ. 
ಸೈನಿಕರಿಗೂ ಭತ್ಯೆ ಹೆಚ್ಚಳ ಮಾಡಲಾಗಿದ್ದು, 14 ಸಾವಿರದಿಂದ -30 ಸಾವಿರ ರೂಪಾಯಿ ಏರಿಕೆ ಮಾಡಲಾಗಿದೆ.  ಎಚ್ ಆರ್ ಎ ಇತರ ಭತ್ಯೆಗಳ ಶಿಫಾರಸ್ಸುಗಳು ಜುಲೈ 1 ರಿಂದ ಜಾರಿಗೆ ಬರಲಿವೆ. X, Y ಹಾಗೂ Z ನಗರಗಳಿಗೆ ಅನುಗುಣವಾಗಿ ತುಟ್ಟಿ ಭತ್ಯೆ ಏರಿಕೆ ಜಾರಿಗೊಳ್ಳಲಿದೆ. 
SCROLL FOR NEXT