ಆಜಂ ಖಾನ್-ಸುಬ್ರಮಣಿಯನ್ ಸ್ವಾಮಿ 
ದೇಶ

ಮುಸ್ಲಿಂ ರಾಷ್ಟ್ರದಲ್ಲಿ ಆಜಂ ಖಾನ್ ಇದೇ ಹೇಳಿಕೆ ನೀಡಿದಿದ್ದರೆ, ಅವರ ತಲೆ ಕಡಿಯುತ್ತಿದ್ದರು: ಸ್ವಾಮಿ

ಭಾರತೀಯ ಸೇನೆಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಸ್ವಚ್ಛಂದವಾಗಿ...

ಲಖನೌ: ಭಾರತೀಯ ಸೇನೆಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಸ್ವಚ್ಛಂದವಾಗಿ ಓಡಾಡಿಕೊಂಡಿದ್ದಾರೆ. ಇದೇ ಹೇಳಿಕೆಯನ್ನು ಮುಸ್ಲಿಂ ರಾಷ್ಟ್ರಗಳಲ್ಲಿ ನೀಡಿದ್ದರೆ ಅವರ ರುಂಡಾ ಚಂಡಾಡುತ್ತಿದ್ದರು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 
ಆಜಂ ಖಾನ್ ನಿನ್ನೆ ಮಹಿಳೆಯರು ಭಾರತೀಯ ಯೋಧರ ಮರ್ಮಾಂಗವನ್ನು ಕತ್ತರಿಸುವ ಮೂಲಕ ಅಚ್ಯಾಚಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿ ವಿವಾದಕ್ಕೀಡಾಗಿದ್ದರು. ಆಜಂ ಖಾನ್ ಹೇಳಿಕೆಗೆ ರಾಜಕೀಯ ನಾಯಕರಿಂದ ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಸುಬ್ರಮಣಿಯನ್ ಸ್ವಾಮಿ ಅವರು ಆಜಂ ಖಾನ್ ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರಿಂದ ಜೀವಂತವಾಗಿ ಓಡಾಡಿಕೊಂಡಿದ್ದಾರೆ. ಇಂತಹ ಹೇಳಿಕೆಯನ್ನು ಮುಸ್ಲಿಂ ರಾಷ್ಟ್ರಗಳಲ್ಲಿ ನೀಡಿದ್ದರೆ ಅವರ ತಲೆಯನ್ನು ಕಡಿಯುತ್ತಿದ್ದರು ಎಂದು ಹೇಳಿದ್ದಾರೆ. 
ಇಂತಹ ನಾಯಕರು ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದು ಮುಸ್ಲಿಂರನ್ನು ತಪ್ಪುದಾರಿಗೆ ಎಳೆಯುವ ಮೂಲಕ ಅವರ ಮತಗಳನ್ನು ವಿಭಜಿಸಲು ನೋಡುತ್ತಾರೆ ಇಂತವರಿಗೂ ಕೂಡಲೇ ಶಿಕ್ಷೆಯಾಗಬೇಕು ಎಂದು ಸ್ವಾಮಿ ಆಗ್ರಹಿಸಿದ್ದಾರೆ. 
ಕಾಶ್ಮೀರ, ಜಾರ್ಖಂಡ್ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಮಹಿಳೆಯರಿಂದ ಯೋಧರು ಹಲ್ಲೆಗೊಳಗಾಗುತ್ತಿದ್ದಾರೆ. ಅಲ್ಲದೆ ಹೆಂಗಸರು ತಮ್ಮ ಮೇಲೆ ನಡೆದ ಅತ್ಯಾಚಾರವನ್ನು ವಿರೋಧಿಸಿ ಯೋಧರ ಗುಪ್ತಾಂಗವನ್ನು ಕತ್ತರಿಸುತ್ತಾರೆ ಎಂದು ಹೇಳುವ ಮೂಲಕ ಭಾರತೀಯ ಯೋಧರಿಗೆ ಅಪಮಾನ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel