ಬಿಹಾರ: ಭಾರತವನ್ನು ಸ್ವಚ್ಛವಾಗಿರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆಯ ಮೂಲಕ ಜನಜಾಗೃತಿ ಮೂಡಿಸುತ್ತಿರುವುದು ಒಂದೆಡೆಯಾದರೆ, ಅವರದ್ದೇ ಸಂಪುಟ ಸಹೋದ್ಯೋಗಿ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಸ್ವಚ್ಛ ಭಾರತವನ್ನು ಸಾರ್ಥಕಗೊಳಿಸಿದ್ದು ಕೇಂದ್ರ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದ್ದಾರೆ.
ಎಲ್ಲಾ ರಾಜ್ಯಗಳು ಬಯಲು ಶೌಚ ಮುಕ್ತವಾಗಬೇಕೆಂದು ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದರೆ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡಿರುವ ದೃಶ್ಯ ವೈರಲ್ ಆಗಿದೆ. ರಾಧಾ ಮೋಹನ್ ಸಿಂಗ್ ಗೋಡೆ ಬದಿ ನಿಂತು ಮೂತ್ರ ವಿಸರ್ಜನೆ ಮಾಡುತ್ತಿರುವುದು ಹಾಗೂ ಅವರ ಬಳಿ ಭದ್ರತಾ ಸಿಬ್ಬಂದಿಗಳು ನಿಂತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿಹಾರದ ಮೋತಿಹಾರಿಯಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಸರ್ಕಾರ 2019 ರ ವೇಳೆಗೆ ರಾಜ್ಯವನ್ನು ಬಯಲು ಶೌಚ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಿದೆ.