ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ಜಿಎಸ್'ಟಿ ಕುರಿತ ನಿಮ್ಮ ನಿಲುವಿನ ಬಗ್ಗೆ ಮರುಚಿಂತನೆ ನಡೆಸಿ: ಕಾಂಗ್ರೆಸ್'ಗೆ ಕೇಂದ್ರ

ದೇಶದ ತೆರಿಗೆ ವ್ಯವಸ್ಥೆ ಇತಿಹಾಸದಲ್ಲಿಯೇ ಅತಿದೊಡ್ಡ ಸುಧಾರಣಾ ಕ್ರಮ ಜಿಎಎಸ್ ಟಿ ಶುಕ್ರವಾರ ರಾತ್ರಿ 12 ಗಂಟೆಗೆ ಜಾರಿಯಾಗುತ್ತಿದ್ದು, ಜಿಎಸ್'ಟಿ ಕುರಿತ ವಿಶೇಷ ಅಧಿವೇಶನ ಬಹಿಷ್ಕರಿಸಲು ಪ್ರತಿಪಕ್ಷಗಳು ತೀರ್ಮಾನಿಸಿರುವ ಹಿನ್ನಲೆಯಲ್ಲಿ ನಿಲುವು...

ನವದೆಹಲಿ: ದೇಶದ ತೆರಿಗೆ ವ್ಯವಸ್ಥೆ ಇತಿಹಾಸದಲ್ಲಿಯೇ ಅತಿದೊಡ್ಡ ಸುಧಾರಣಾ ಕ್ರಮ ಜಿಎಎಸ್ ಟಿ ಶುಕ್ರವಾರ ರಾತ್ರಿ 12 ಗಂಟೆಗೆ ಜಾರಿಯಾಗುತ್ತಿದ್ದು, ಜಿಎಸ್'ಟಿ ಕುರಿತ ವಿಶೇಷ ಅಧಿವೇಶನ ಬಹಿಷ್ಕರಿಸಲು ಪ್ರತಿಪಕ್ಷಗಳು ತೀರ್ಮಾನಿಸಿರುವ ಹಿನ್ನಲೆಯಲ್ಲಿ ನಿಲುವು ಕುರಿತಂತೆ ಮರುಚಿಂತನೆ ನಡೆಸುವಂತೆ ಕಾಂಗ್ರೆಸ್'ಗೆ ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಸ್ವತಂತ್ರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ) ಜಾರಿಯಾಗುತ್ತಿದ್ದು, ದೇಶದ ಅತೀ ದೊಡ್ಡ ಸುಧಾರಣಾ ಪ್ರಕ್ರಿಯೆಯಲ್ಲಿ ವಿರೋಧ ಪಕ್ಷಗಳು ಅಂತರ ಕಾಯ್ದುಕೊಳ್ಳುತ್ತಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.
ವಿಶೇಷ ಅಧಿವೇಶ ಪಕ್ಷದ ಕಾರ್ಯಕ್ರಮವಲ್ಲ. ಜಿಎಸ್ ಟಿ ಕುರಿತ ವಿಶೇಷ ಅಧಿವೇಶನವನ್ನು ಬಹಿಷ್ಕರಿಸುತ್ತಿರುವ ಕಾಂಗ್ರೆಸ್ ಹಾಗೂ ಇತರೆ ವಿರೋಧ ಪಕ್ಷಗಳು ತಮ್ಮ ನಿಲುವಿನ ಕುರಿತಂತೆ ಮರು ಚಿಂತನೆ ನಡೆಸಲಿ. ಸರ್ಕಾರದೊಂದಿಗೆ ಕೈಜೋಡಿಸಲಿ ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್