ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟೆ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ.
ಇಂದು ಬೆಳಿಗ್ಗೆ ಬಾಲಕೋಟೆ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ನಿನ್ನೆ ಕೂಡ ಪೂಂಚ್ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದರು.