ಉತ್ತರಪ್ರದೇಶ: ಕತ್ತು ಸೀಳಿ ಪೊಲೀಸ್ ಅಧಿಕಾರಿ ಭೀಕರ ಕೊಲೆ
ಪೊಲೀಸ್ ಅಧಿಕಾರಿಯೊಬ್ಬರ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಉತ್ತರಪ್ರದೇಶದ ಬಿಜ್ನೋರ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ...
ಬಿಜ್ನೊರ್ (ಉತ್ತರಪ್ರದೇಶ): ಪೊಲೀಸ್ ಅಧಿಕಾರಿಯೊಬ್ಬರ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಉತ್ತರಪ್ರದೇಶದ ಬಿಜ್ನೋರ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸೆರ್ಹೋಜ್ ಸಿಂಗ್ ಹತ್ಯೆಯಾದ ಪೊಲೀಸ್ ಅಧಿಕಾರಿ ಎಂದು ಗುರ್ತಿಸಲಾಗಿದೆ. ಸಹ್ರೋಜ್ ಅವರು ಉತ್ತರಪ್ರದೇಶದ ಮಂದವಾರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಹತ್ಯೆಯಾದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಡಿಎಂ.ಜಗತ್ರಾಜ್ ಮತ್ತು ಎಸ್ ಪಿ ಅತುಲ್ ಶರ್ಮಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ನಡು ರಸ್ತೆಯಲ್ಲಿ ಸಹ್ರೋಜ್ ಅವರ ಮೃತದೇಹ ದೊರಕಿದ್ದು, ದೇಹದ ಮೇಲೆ ಹಲವಾರು ಗಾಯಗಳಿರುವುದು ಕಂಡುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.