ನವದೆಹಲಿ: ಇಬ್ಬರು ಅಪ್ರಾಪ್ತ ಬಾಲಕರು 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ದೆಹಲಿಯ ಬಿಂದಪುರ್ ಪ್ರದೇಶದಲ್ಲಿ ನಡೆದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿರುವುದಾಗಿ ಗುರುವಾರ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಆರೋಪಿಗಳ ಪೈಕಿ ಓರ್ವ ಆರೋಪಿ ಸಂತ್ರಸ್ತ ಬಾಲಕಿಯ ಗೆಳೆಯನಾಗಿದ್ದು, ಶಾಲೆಗೆ ಹೋಗುತ್ತಿದ್ದ ವೇಳೆ ಆಕೆಗೆ ಲಿಫ್ಟ್ ಕೊಡುವುದಾಗಿ ಹೇಳೆ ಬಿಂದಪುರ್ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿಗೆ ಬಾಲಕನ ಇನ್ನೊಬ್ಬ ಸ್ನೇಹಿತ ಸಹ ಆಗಮಿಸಿದ್ದು, ಬಳಿಕ ಇಬ್ಬರು ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸಂತ್ರಸ್ತ ಬಾಲಕಿಯನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಸ್ಕೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮತ್ತೊಬ್ಬ ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.