ವಿ.ಕೆ. ಶಶಿಕಲಾ 
ದೇಶ

ಶಶಿಕಲಾ ಗೆ ಎಸಿ, ಹಾಸಿಗೆ ಒದಗಿಸಿಲ್ಲ: ಸ್ಥಳಾಂತರಕ್ಕೆ ಅರ್ಜಿ ಸಲ್ಲಿಸಿಲ್ಲ: ಜೈಲು ಅಧಿಕಾರಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ....

ಚೆನ್ನೈ: ಅಕ್ರಮ ಆಸ್ತಿ  ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ  ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರಿಗೆ ಪ್ರತ್ಯೇಕ ಸ್ನಾನದ ಮನೆ, ವಾಟರ್ ಹೀಟರ್‌, ಹವಾನಿಯಂತ್ರಿತ ವ್ಯವಸ್ಥೆ (ಎ.ಸಿ) ಮಂಚ ಮತ್ತು ಹಾಸಿಗೆ ಸೌಲಭ್ಯ ಒದಗಿಸಿಲ್ಲ ಎಂದು ಕಾರಾಗೃಹ ಅಧಿಕಾರಿಗಳು ತಿಳಿಸಿದ್ದಾರೆ.

ಶಶಿಕಲಾ ಅವರಿಗೆ ಕೇವಲ ಟಿ.ವಿ ಸೌಲಭ್ಯ ಒದಗಿಸಲಾಗಿದೆ. ಇನ್ನುಳಿದಂತೆ ಯಾವುದೇ ಅನುಕೂಲಗಳನ್ನು ನೀಡಲಾಗಿಲ್ಲ ಎಂದು ಕೇಂದ್ರ ಕಾರಾಗೃಹದ ಡಿಐಜಿ ತಿಳಿಸಿದ್ದಾರೆ.

ಚೆನ್ನೈ ಮೂಲದ ಆರ್‌ಟಿಐ ಕಾರ್ಯಕರ್ತಎಂ.ಪಿ. ರಾಜವೇಲಾಯುಧಮ್‌ ಎಂಬುವವರು ಫೆಬ್ರವರಿ 20 ರಂದು ಸಲ್ಲಿಸಿದ್ದ  ಅರ್ಜಿಗೆ ಫೆಬ್ರವರಿ 23 ರಂದು ಉತ್ತರ ನೀಡಿದ್ದಾರೆ.  ಕರ್ನಾಟಕ ಕಾರಾಗೃಹ ನಿಯಮಗಳಂತೆ ಟಿಟಿವಿ ದಿನಕರ್ ಅವರಿಗೆ ಶಶಿಕಲಾ ಅವರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಶಿಕಲಾ ಅವರ ಜತೆಗೆ ಸುಧಾಕರನ್ ಮತ್ತು ಇಳವರಸಿಗೆ ಸುಪ್ರೀಂಕೋರ್ಟ್‌ ಜೈಲು ಶಿಕ್ಷೆ  ವಿಧಿಸಿದೆ. ಬೆಂಗಳೂರು ಕೇಂದ್ರ ಕಾರಾಗೃಹದಿಂದ ಚೆನ್ನೈಗೆ ಸ್ಥಳಾಂತರ ಮಾಡುವ ಸಂಬಂಧ ಮೂವರು ಆರೋಪಿಗಳಿಂದ ಅಂತಹ ಯಾವುದೇ ಅರ್ಜಿ ಸಲ್ಲಿಕೆ ಯಾಗಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT