ವೀರೇಂದ್ರ ಸೆಹ್ವಾಗ್ 'ಅಶಿಕ್ಷಿತ' ಎಂಬ ಹೇಳಿಕೆ ಹಿಂಪಡೆದ ಜಾವೇದ್ ಅಖ್ತರ್
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಶಿಕ್ಷಿತ ಎಂದು ಹೇಳಿದ್ದ ಗೀತ ಸಾಹಿತಿ ಜಾವೇದ್ ಅಖ್ತರ್ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ...
ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಶಿಕ್ಷಿತ ಎಂದು ಹೇಳಿದ್ದ ಗೀತ ಸಾಹಿತಿ ಜಾವೇದ್ ಅಖ್ತರ್ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.
ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ನಡೆದ ಎಡ-ಬಲ ವಿದ್ಯಾರ್ಥಿಗಳ ನಡುವಿನ ಸಂಘರ್ಷ ಇಡೀ ಭಾರತದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮೃತ ಸೇನಾನಿ ಮಂದೀಪ್ ಸಿಂಗ್ ಪುತ್ರಿ ಗುರ್ಮೆಹರ್ ಕೌರ್ ಈ ಹಿಂದೆ ನನ್ನ ತಂದೆಯನ್ನು ಕೊಂದಿದ್ದು ಪಾಕಿಸ್ತಾನವಲ್ಲ, ಯುದ್ಧ ಎಂದು ವಿದ್ಯಾರ್ಥಿನಿ ಹೇಳಿದ್ದಳು. ಇದನ್ನು ಹ್ಯಾಸ ಮಾಡಿದ್ದ ಸೆಹ್ವಾಗ್ 2 ತ್ರಿಶತಕ ಹೊಡೆದಿದ್ದು ನಾನಲ್ಲ, ನನ್ನ ಬ್ಯಾಟ್ ಎಂದಿದ್ದರು.
ಇದರಿಂದ ಆಕ್ರೋಶಗೊಂಡು ಜಾವೇದ್ ಸೆಹ್ವಾಗ್ ರನ್ನು ಅಶಿಕ್ಷಿತ ಎಂದು ವರ್ಣಿಸಿದ್ದರು. ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದ ಸೆಹ್ವಾಗ್ ತಾನು ಕೇವಲ ಹಾಸ್ಯಕ್ಕಾಗಿ ಮಾತ್ರ ಮೇಲಿನಂತೆ ಹೇಳಿದ್ದಾಗಿ ನುಡಿದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.