ನರೇಂದ್ರ ಮೋದಿ 
ದೇಶ

ಉತ್ತರಪ್ರದೇಶ ಚುನಾವಣೆ: ವಾರಣಾಸಿ ಗಲ್ಲಿಗಳಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಉತ್ತರಪ್ರದೇಶ ಚುನಾವಣೆ ಹಿನ್ನೆಲೆ ಸ್ವಕ್ಷೇತ್ರ ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರು ಭರ್ಜರಿಯಾಗಿ ರೋಡ್ ಶೋ ನಡೆಸಿದರು...

ವಾರಣಾಸಿ(ಉತ್ತರಪ್ರದೇಶ): ಉತ್ತರಪ್ರದೇಶ ಚುನಾವಣೆ ಹಿನ್ನೆಲೆ ಸ್ವಕ್ಷೇತ್ರ ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರು ಭರ್ಜರಿಯಾಗಿ ರೋಡ್ ಶೋ ನಡೆಸಿದರು.
ಮೇ 8ರಂದು 7ನೇ ಹಂತದಲ್ಲಿ ಉತ್ತರಪ್ರದೇಶ 43 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಮತದಾರರನ್ನು ಸೆಳೆಯಲು ನರೇಂದ್ರ ಮೋದಿ ಅವರು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ರೋಡ್ ಶೋ ಉದ್ದಕ್ಕೂ ಹರ ಹರ ಮೋದಿ ಎಂದು ಘೋಷಣೆ ಕೂಗುತ್ತಿದ್ದರು. ಮೋದಿ ಅವರು ಸ್ವಕ್ಷೇತ್ರ ವಾರಣಾಸಿಯಲ್ಲಿ ನಾಳೆಯರೆಗೂ ವಾಸ್ತವ್ಯ ಹೂಡಲಿದ್ದಾರೆ. 
ನಿನ್ನೆಯಿಂದ ವಾರಣಾಸಿಯಲ್ಲಿ ರೋಡ್ ಶೋ ನಡೆಸುತ್ತಿರುವ ಪ್ರಧಾನಿ ಮೋದಿ ಅವರು ಪೊಲೀಸ್ ಲೈನ್ ನಿಂದ ಕಾಶಿ ವಿದ್ಯಾಪೀಠದವರೆಗೂ ಸುಮಾರು 5 ಕಿ.ಮೀ ದೂರ ಮೋದಿ ರೋಡ್ ಶೋ ನಡೆಸಿದರು. 
ವಾರಣಾಸಿಯಲ್ಲಿ ರೋಡ್ ಶೋ ನಡೆಸುತ್ತಿರುವ ಮೋದಿ ಅವರು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪ್ರಧಾನಿಯೊಬ್ಬರು ಚುನಾವಣಾ ನಿಮಿತ್ತ ರೋಡ್ ಶೋ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?