ದೇಶ

ಜಮ್ಮು-ಕಾಶ್ಮೀರದಲ್ಲಿ ಲಘು ಭೂಕಂಪನ: 4.8ರಷ್ಟು ತೀವ್ರತೆ ದಾಖಲು

Manjula VN
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಾಯುವ್ಯ ಭಾಗಗಳಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8ರಷ್ಟು ತೀವ್ರತೆ ದಾಖಲಾಗಿದೆ. 
ಭೂಕಂಪದ ಪರಿಣಾಮ ಯಾವುದೇ ರೀತಿಯ ನಷ್ಟ, ಸಾವು-ನೋವುಗಳ ಸಂಭವಿಸಿರುವುದಾಗಿ ವರದಿಗಳಾಗಿಲ್ಲ. 
ಇಂದು ಬೆಳಿಗ್ಗೆ 8.14ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಭಯಭೀತರಾದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. 
ಹಿಮಾಲಯ ಪರ್ವತ ಶ್ರೇಣಿಗಳಲ್ಲಿ ಭೂಕಂಪ ಸಂಭವಿಸುವ ಸಾಧ್ಯತೆಗಳಿವೆ ಎಂದು ಭೂವೈಜ್ಞಾನಿಕ ಅಭಿಪ್ರಾಯಪಟ್ಟಿದ್ದು, ಜಮ್ಮು ಮತ್ತು ಕಾಶ್ಮೀರದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿರುವ ಬೆನ್ನಲ್ಲೇ ಗುಜರಾತ್ ರಾಜ್ಯದ ಹಲವು ಜಿಲ್ಲೆಗಳಲ್ಲೂ ತೀವ್ರ ಪ್ರಮಾಣದ ಭೂಕಂಪನ ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ. ರಿಕ್ಟರ್ ಮಾಪಕದಲ್ಲಿ 4.0ರಷ್ಟು ತೀವ್ರತೆ ದಾಖಲಾಗಿದೆ. 
SCROLL FOR NEXT