ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜರ ಮನೆಗೆ ಪ್ರಧಾನಿ ಮೋದಿ ಭೇಟಿ
ವಾರಾಣಸಿ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮಾ.06 ರಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜನರಿದ್ದ ಮನೆಗೆ ತೆರಳಿ ಗೌರವ ಸಲ್ಲಿಸಿದ್ದಾರೆ.
ಗಡ್ವಾಘಾಟ್ ರಾಮ್ ನಗರದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನಿವಾಸಕ್ಕೆ ತೆರಳಿ 30 ನಿಮಿಷಗಳ ಕಾಲ ಇದ್ದ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಶಾಸ್ತ್ರಿ ಅವರ ಫೋಟೋಗಳಿರುವ ಕೋಠಡಿಯಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳೀಯರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಚರಿತ್ರೆಯನ್ನು ಹಾಡುಗಳ ಮೂಲಕ ಪ್ರಸ್ತುತ ಪಡಿಸಿದರು.
ಇದಕ್ಕೂ ಮುನ್ನ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಫೋಟೋಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ಮನೆಯ ಗೇಟ್ ನ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ಥಳಿಗೆ ಹೂವಿನ ಹಾರ ಹಾಕಿ ಗೌರವ ಸಲ್ಲಿಸಿದರು.