ಸಂಗ್ರಹ ಚಿತ್ರ 
ದೇಶ

ವಿಧಾನಸಭಾ ಚುನಾವಣೆ 2017: ಉ.ಪ್ರದೇಶ ಶೇ.26, ಮಣಿಪುರದಲ್ಲಿ ಶೇ. 45 ರಷ್ಟು ಮತದಾನ

ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಈ ವರೆಗೂ ಉತ್ತರಪ್ರದೇಶದಲ್ಲಿ ಶೇ.26 ಹಾಗೂ ಮಣಿಪುರದಲ್ಲಿ ಶೇ.45 ರಷ್ಟು ಮತದಾನವಾಗಿರುವುದಾಗಿ...

ನವದೆಹಲಿ: ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಈ ವರೆಗೂ ಉತ್ತರಪ್ರದೇಶದಲ್ಲಿ ಶೇ.26 ಹಾಗೂ ಮಣಿಪುರದಲ್ಲಿ ಶೇ.45 ರಷ್ಟು ಮತದಾನವಾಗಿರುವುದಾಗಿ ಬುಧವಾರ ತಿಳಿದುಬಂದಿದೆ. 
ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಉಭಯ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆಗಳು ಆರಂಭಗೊಂಡಿದೆ. ಸಂಜೆ 5 ಗಂಟೆ ಮತದಾನ ಅಂತ್ಯಗೊಳ್ಳಲಿದೆ. ಚುನಾವಣೆ ಹಿನ್ನಲೆಯಲ್ಲಿ ಉತ್ತರಪ್ರದೇಶ ಹಾಗೂ ಮಣಿಪುರದಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳ ನಾಯಕರು ಸಾಮಾನ್ಯ ಜನರಂತೆಯೇ ಸಾಲಿನಲ್ಲಿ ನಿಂತು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ. 
ಬೆಳಿಗ್ಗೆ ಆರಂಭವಾದ ಮತದಾನ ಪ್ರಕ್ರಿಯೆ ಬಿರುಸಿನಿಂದ ಮುಂದುವರೆಯುತ್ತಿದ್ದು, ಈ ವರೆಗೂ ಉತ್ತರಪ್ರದೇಶದಲ್ಲಿ ಶೇ.26 ಹಾಗೂ ಮಣಿಪುರ ರಾಜ್ಯದಲ್ಲಿ ಶೇ.45 ರಷ್ಟು ಮತದಾನವಾಗಿರುವುದಾಗಿ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಉಭಯ ರಾಜ್ಯಗಳಲ್ಲಿ ಕಡೆಯ ಹಂತದ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಉತ್ತರಪ್ರದೇಶದಲ್ಲಿ ಇಂದು ಕೊನೆಯ ಹಂತದ ಮತದಾನ ನಡೆಯುತ್ತಿದೆ. ನೀವು ನಿಮ್ಮ ಅಮೂಲ್ಯ ಮತಗಳನ್ನು ಮತದಾನ ಮಾಡಿ. ಮೊದಲು ಮತಹಾಕಿ ನಂತರ ಊಟ ಮಾಡಿ ಎಂದು ಹೇಳಿದ್ದಾರೆ. 
ಮಣಿಪುರದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಮತದಾನ ಮಾಡುವಂತೆ ತಿಳಿಸಿದ್ದಾರೆ. 
ಉತ್ತರಪ್ರದೇಶದಲ್ಲಿ ಈಗಾಗಲೇ 6 ಹಂತಗಳ ಚುನಾವಣೆ ಪೂರ್ಣಗೊಂಡಿದ್ದು, ಇಂದು 7ನೇ ಹಂತದಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಮತ್ತೊಂದೆಡೆ ಮಣಿಪುರದಲ್ಲಿಯೂ ಎರಡನೇ ಹಾಗೂ ಕೊನೆಯ ಹಂತದಲ್ಲಿ ಮತದಾನ ಚುನಾವಣೆ ನಡೆಯುತ್ತಿದೆ. 
ಉತ್ತಪ್ರದೇಶ ಒಟ್ಟು 404 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಕ್ಷೇತ್ರ ವಾರಣಾಸಿ, ಸೋನ್ ಭದ್ರ, ಮೀರ್ಜ್ ಪುರ್, ಚಂದೌಲಿ ಸೇರಿದಂತೆ ಒಟ್ಟು 7 ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮಣಿಪುರ 66 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಇಂದು ಒಟ್ಟು 22 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!