ಸಂಗ್ರಹ ಚಿತ್ರ 
ದೇಶ

ಉಪಹಾರ್ ದುರಂತ: ನಾಳೆ ಗೋಪಾಲ್ ಅನ್ಸಲ್ ನ್ಯಾಯಾಲಯಕ್ಕೆ ಶರಣು!

1997ರ ಉಪಹಾರ್ ಚಿತ್ರ ಮಂದಿರದಲ್ಲಿನ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿರುವ ಚಿತ್ರಮಂದಿರ ಮಾಲೀಕ ಗೋಪಾಲ್ ಅನ್ಸಲ್ ಗುರುವಾರ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ.

ನವದೆಹಲಿ: 1997ರ ಉಪಹಾರ್ ಚಿತ್ರ ಮಂದಿರದಲ್ಲಿನ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿರುವ ಚಿತ್ರಮಂದಿರ ಮಾಲೀಕ ಗೋಪಾಲ್ ಅನ್ಸಲ್ ಗುರುವಾರ ನ್ಯಾಯಾಲಯಕ್ಕೆ  ಶರಣಾಗುವ ಸಾಧ್ಯತೆ ಇದೆ.

ಈ ಹಿಂದೆ ಫೆಬ್ರವರಿಯಲ್ಲಿ ನಡೆದಿದ್ದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪು ಪ್ರಕಟಿಸಿತ್ತು. ಈ ವೇಳೆ ಗೋಪಾಲ್ ಅನ್ಸಲ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಅಲ್ಲದೆ ಗೋಪಾಲ್  ಅನ್ಸಾಲ್ ಇನ್ನೊಂದು ತಿಂಗಳು ಅಂದರೆ ನಾಲ್ಕು ವಾರಗಳ  ಒಳಗೆ ಪೊಲೀಸರಿಗೆ ಶರಣಾಗಿ ಶಿಕ್ಷೆ ಅನುಭವಿಸಬೇಕು ಎಂದು ಆದೇಶ ಹೊರಡಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶದ ಬಳಿಕ ನ್ಯಾಯಾಲಯಕ್ಕೆ ಮತ್ತೆ ಮನವಿ  ಸಲ್ಲಿಸಿದ್ದ ಗೋಪಾಲ್ ಅನ್ಸಲ್, ತಮ್ಮ ಸಹೋದರ ಸುಶೀಲ್ ಅನ್ಸಲ್ ರಂತೆಯೇ ತಾವೂ ಕೂಡ ಅನಾರೋಗ್ಯ ಪೀಡಿತರಾಗಿದ್ದು, ತಮಗೂ ತಮ್ಮ ಸಹೋದರನಿಗೆ ನೀಡಿರುವ ವಿನಾಯಿತಿ ನೀಡಬೇಕು ಎಂದು ಕೋರಿದ್ದರು.

ಆದರೆ ನ್ಯಾಯಾಲಯ ಗೋಪಾಲ್ ಅನ್ಸಲ್ ಅವರ ಮನವಿ ತಿರಸ್ಕರಿಸಿದ್ದು, ನಾಳೆ ಅನಿವಾರ್ಯವಾಗಿ ಗೋಪಾಲ್ ಅನ್ಸಲ್ ನ್ಯಾಯಾಲಯಕ್ಕೆ ಹಾಜರಾಗಿ ಶರಣಾಗಬೇಕಿದೆ. ಅಂತೆಯೇ ಒಂದು ವರ್ಷ ಜೈಲು ಶಿಕ್ಷೆಯನ್ನು ಕೂಡ  ಅನುಭವಿಸಬೇಕಿದೆ.

ಇನ್ನು ಇಂದು ನಡೆದ ವಿಚಾರಣೆಯಲ್ಲಿ ಉಪಹಾರ್ ದುರಂತದ ಸಂತ್ರಸ್ತರ ಪರ ವಕೀಲರಾದ ನೀಲಂ ಕೃಷ್ಣ ಮೂರ್ತಿ ಅವರು ತಮ್ಮ ವಾದ ಮಂಡಿಸುತ್ತಾ, ಗೋಪಾಲ್ ಅನ್ಸಲ್ ಅವರು ಉದ್ದೇಶ ಪೂರ್ವಕವಾಗಿ ಶರಣಾಗತಿಯನ್ನು  ವಿಳಂಬ ಮಾಡುತ್ತಿದ್ದಾರೆ. ಕಳೆದ 10 ದಿನಗಳಿಂದಲೂ ಗೋಪಾಲ್ ಅನ್ಸಲ್ ಶರಣಾಗತಿ ವಿಳಂಬಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂದು ವಾದ ಮಂಡಿಸಿದ್ದರು.

ದೇಶ ಕಂಡ ಅತ್ಯಂತ ಭೀಕರ ಅಗ್ನಿ ದುರಂತಗಳಲ್ಲಿ ಉಪಹಾರ್ ದುರಂತ ಕೂಡ ಒಂದು ಎನ್ನಲಾಗುತ್ತದೆ. ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್ ಸಮೀಪವಿರುವ ಉಪಹಾರ್ ಚಿತ್ರಮಂದಿರದಲ್ಲಿ 1997 ಜೂನ್ 13ರಂದು "ಬಾರ್ಡರ್" ಚಿತ್ರ   ಪ್ರದರ್ಶನಗೊಳ್ಳುತ್ತಿದ್ದ ವೇಳೆಯಲ್ಲಿ ಸಂಭವಿಸಿದ ಅಗ್ನಿ ಅಕಸ್ಮಿಕದಿಂದಾಗಿ ಸುಮಾರು 59 ಮಂದಿ ಅಸುನೀಗಿದ್ದರು. ಅಲ್ಲದೆ ಘಟನೆಯಲ್ಲಿ ಉಸಿರುಗಟ್ಟಿ ಮತ್ತು ಕಾಲ್ತುಳಿತದಿಂದಾಗಿ ಸುಮಾರು 100ಕ್ಕೂ ಅಧಿಕ ಮಂದಿ ಗಂಭೀರವಾಗಿ   ಗಾಯಗೊಂಡಿದ್ದರು. ಚಿತ್ರಮಂದಿರದಲ್ಲಿ ಅಗ್ನಿ ನಿಯಂತ್ರಕ ಸಾಧನಗಳಿಲ್ಲದೇ ಇದ್ದುದರಿಂದ ದುರಂತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಯಿತು ಎಂದು ನ್ಯಾಯಾಲಯದಲ್ಲಿ ಆರೋಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT