ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ, ಕಾಮಾಟಿಪುರ ಹೆಡ್‌ ಕಾನ್‌ಸ್ಟೆಬಲ್‌ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮಾಟಿಪುರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ನನ್ನು...

ಹೈದರಾಬಾದ್‌: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮಾಟಿಪುರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ನನ್ನು ಆತನ ಸಹೋದ್ಯೋಗಿಗಳು ಶುಕ್ರವಾರ ಬಂಧಿಸಿದ್ದಾರೆ. 
15 ವರ್ಷದ ಬಾಲಕಿಯ ಬಡತನವನ್ನು ದುರುಪಯೋಗ ಮಾಡಿಕೊಂಡು ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ 42 ವರ್ಷದ ಹೆಡ್‌ ಕಾನ್‌ಸ್ಟೆಬಲ್‌ ಮೊಹಮ್ಮದ್ ಮೆಹಬೂಬ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕಾಮಾಟಿಪುರ ಪೊಲೀಸ್‌ ಸ್ಟೇಶನ್‌ನಲ್ಲಿ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮೆಹಬೂಬ್, ಠಾಣೆಯ ಎದುರಗಡೆ ವಾಸಿಸುತ್ತಿದ್ದ ಬಾಲಕಿಗೆ ಸಣ್ಣ ಪುಟ್ಟ ಗಿಫ್ಟ್ ಗಳನ್ನು ನೀಡಿ ಅಕ್ರಮ ಸಂಬಂಧ ಬೆಳೆಸಿದ್ದಾನೆ. ಬಳಿಕ ಬಾಲಕಿಯನ್ನು ಬೇರೆ ಬೇರೆ ರಾಜ್ಯಗಳಿಗೂ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಕಾಮಾಟಿಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸ್ ಸುಧರ್ಶನ್ ಅವರು ತಿಳಿಸಿದ್ದಾರೆ.
ಸಂತ್ರಸ್ಥ ಬಾಲಕಿಯ ಹಿರಿಯ ಸಹೋದರಿ ಇಂದು ಪೊಲೀಸರಿಗೆ ದೂರು ನೀಡಿದ್ದು, ದೂರನ್ನು ಆಧರಿಸಿಕೊಂಡು ಪೊಲೀಸರು ಆರೋಪಿ ಹೆಡ್‌ ಕಾನ್‌ಸ್ಟೆಬಲ್‌ ನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸುದರ್ಶನ್‌ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಯಾರೊಬ್ಬರು ಕಾನೂನಿಗಿಂತ ದೊಡ್ಡವರಲ್ಲ. ಆರೋಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೈದರಾಬಾದ್ ಪೊಲೀಸ್ ಆಯುಕ್ತರಿಗೆ ವರದಿ ನೀಡುವುದಾಗಿ ಹೈದರಾಬಾದ್ ದಕ್ಷಿಣ ವಲಯ ಉಪ ಪೊಲೀಸ್ ಆಯುಕ್ತ ವಿ ಸತ್ಯನಾರಾಯಣ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!